ಮಂಗಳೂರು: ನಗರದ ಕೊಣಾಜೆಯ ಮಂಗಳೂರು ವಿವಿಯ ಕ್ಯಾಂಪಸ್ನಲ್ಲಿರುವ ಪ್ರಥಮ ದರ್ಜೆ ಕಾಲೇಜನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಸ್ಥಗಿತಗೊಳಿಸಲು ವಿವಿ ನಿರ್ಧರಿಸಿರುವುದನ್ನು ಖಂಡಿಸುವುದಾಗಿ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ತಿಳಿಸಿದರು.
ಪ್ರಥಮ ದರ್ಜೆ ಕಾಲೇಜು ಸರ್ಕಾರದ ಅನುಮೋದನೆಯೊಂದಿಗೆ 2017ರಲ್ಲಿ ಆರಂಭಗೊಂಡಿತ್ತು. ಸುಮಾರು 270ರಷ್ಟು ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಮೊದಲ ಹಾಗೂ ದ್ವಿತೀಯ ವರ್ಷವನ್ನು ಈಗಾಗಲೇ ಪೂರೈಸಿರುವ ವಿದ್ಯಾರ್ಥಿಗಳನ್ನು ಅವರು ಅಪೇಕ್ಷಿಸುವ ಹತ್ತಿರದ ಕಾಲೇಜುಗಳಿಗೆ ವರ್ಗಾವಣೆ ಮಾಡಲು ವಿವಿ ಚಿಂತನೆ ನಡೆಸುತ್ತಿದೆ. ಅಲ್ಲದೇ, 2020-21ನೇ ಅವಧಿಗೆ ಪ್ರವೇಶಾತಿಯನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ.
ಪ್ರಥಮ ದರ್ಜೆ ಕಾಲೇಜನ್ನು ಸ್ಥಗಿತಗೊಳಿಸುವುದರಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಬಹುದೊಡ್ಡ ನಷ್ಟ ಉಂಟಾಗಲಿದೆ. ಆದ್ದರಿಂದ ಕಾಲೇಜು ಮುಂದುವರಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ಧಕ್ಕೆ ಉಂಟಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ನಾಳೆ ಉಪ ಕುಲಪತಿಗಳನ್ನು ಎನ್ಎಸ್ ಯುಐ ನಿಯೋಗ ಭೇಟಿ ಮಾಡಿ ಈ ಬಗ್ಗೆ ಮನವಿ ಮಾಡಲಿದ್ದೇವೆ. ತಕ್ಷಣ ಮಂಗಳೂರು ವಿವಿ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದಲ್ಲಿ ಜಿಲ್ಲಾದ್ಯಂತ ಎನ್ಎಸ್ ಯುಐ ತೀವ್ರ ಪ್ರತಿಭಟನೆ ನಡೆಸಲಿದೆ ಎಂದು ಸವಾದ್ ಸುಳ್ಯ ತಿಳಿಸಿದರು.