ಕಡಬ: ಬಿಳಿನೆಲೆಯಲ್ಲಿ ಅನಧಿಕೃತ ಶೆಡ್ ತೆರವುಗೊಳಿಸಲು ಅಧಿಕಾರಿಗಳಿಗೆ ಸಾಧ್ಯವಿಲ್ಲವಂತೆ. ಜಿಲ್ಲಾ ಉಸ್ತುವಾರಿ ಸಚಿವರು ಸಮಸ್ಯೆ ಇತ್ಯರ್ಥ ಮಾಡುತ್ತಾರೆ ಎಂದಿದ್ದಾರೆ. ಹಾಗಾದ್ರೆ ಅಧಿಕಾರಿಗಳು ರಜೆ ಹಾಕಿ ಮನೆಗೆ ಹೋಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ನಿರ್ಮಾಣವಾದ ಅಕ್ರಮ ಶೆಡ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಮಿಥನ್ ಭೇಟಿ ನೀಡಿದ್ರು. ಈ ವೇಳೆ ಮಾತನಾಡಿದ ಅವರು, ಅನಧಿಕೃತ ಶೆಡ್ ತೆರವುಗೊಳಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿರುವುದನ್ನು ಜನ ಗಮನಿಸಿದ್ದಾರೆ.
ಪಂಚಾಯತ್ನಿಂದ ಪರವಾನಗಿ ಪಡೆಯದೆ ಶೆಡ್ ನಿರ್ಮಿಸಿರುವುದರಿಂದ ತೆರವುಗೊಳಿಸಲು ನೋಟಿಸ್ ನೀಡಲಾಗಿದೆ. ಆದರೂ ಸಹ ಅಧಿಕಾರಿಗಳು ಸಬುಬೂ ಹೇಳುತ್ತಿದ್ದಾರೆ. ಕೂಡಲೇ ಶೆಡ್ ತೆರವುಗೊಳಿಸದಿದ್ದಲ್ಲಿ ಜಿಲ್ಲಾ ಮಟ್ಟದಲ್ಲಿ ಹೋರಾಟ ಆನಿವಾರ್ಯವಾಗಲಿದೆ ಎಂದು ಹೇಳಿದ್ದಾರೆ.