ETV Bharat / state

ವೇತನ ನೀಡದೆ ಬಾಲ ಕಾರ್ಮಿಕರು, ಮಹಿಳೆಯರ ದುಡಿಮೆ: ಸುಳ್ಯದಲ್ಲಿ ಅಧಿಕಾರಿಗಳ ದಾಳಿ

ಬಚ್​ಪನ್ ಬಚಾವೋ ರಾಜ್ಯ ಸಮನ್ವಯಾಧಿಕಾರಿ ಬೆಂಗಳೂರಿನ ಬಿನು ವರ್ಗೀಸ್, ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಅವರ ನೇತೃತ್ವದಲ್ಲಿ ಬಾಲ ಕಾರ್ಮಿಕ ಅಧಿಕಾರಿಗಳು, ಪುತ್ತೂರು ಕಾರ್ಮಿಕ ಇಲಾಖೆ ಅಧಿಕಾರಿಗಳು, ಸುಳ್ಯ ಸಿಡಿಪಿಓ, ಇನ್ನಿತರೆ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕಿದ್ದಾರೆ.

officials-raided-house-in-allegations-of-child-labour-case
ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳು
author img

By

Published : Jul 9, 2021, 10:47 PM IST

ಸುಳ್ಯ (ದ.ಕ): ವ್ಯಕ್ತಿಯೋರ್ವರ ಮನೆಯಲ್ಲಿ ಪುಟ್ಟ ಮಕ್ಕಳು, ಮಹಿಳೆಯರನ್ನು ವೇತನ ನೀಡದೆ ದುಡಿಸಿಕೊಂಡಿರುವ ಆರೋಪ ಹಿನ್ನೆಲೆ ಜಿಲ್ಲಾಧಿಕಾರಿ ಆದೇಶದಂತೆ ವಿವಿಧ ಇಲಾಖೆ ಅಧಿಕಾರಿಗಳು ಮನೆ ಮೇಲೆ ದಾಳಿ ನಡೆಸಿದ್ದಾರೆ.

ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳದ ವಿಶ್ವನಾಥ್ ಭಟ್ ಎಂಬವರ ಮನೆಯಲ್ಲಿ ಸುಮಾರು 8-10 ಮಕ್ಕಳು ಹಾಗೂ ಮಹಿಳೆಯರನ್ನು ದುಡಿಸುತ್ತಿದ್ದು, ಯಾವುದೇ ರೀತಿಯಲ್ಲಿ ಸಂಬಳವನ್ನು ನೀಡಲಾಗುತ್ತಿಲ್ಲ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ಪುಟ್ಟ ಪುಟ್ಟ ಮಕ್ಕಳು ದನ ಮೇಯಿಸುತ್ತಿರುವ ವೀಡಿಯೋ ಒಂದು ವೈರಲ್ ಆಗಿತ್ತು.

ವೇತನ ನೀಡದೆ ಬಾಲ ಕಾರ್ಮಿಕರು, ಮಹಿಳೆಯರ ದುಡಿಮೆ ಆರೋಪ

ಸಾಮಾಜಿಕ ಸಂಘಟನೆ ನೀತಿ ತಂಡಕ್ಕೆ ದೊರೆತ ಮಾಹಿತಿ ಹಿನ್ನೆಲೆ ಬಚ್​​​​ಪನ್ ಬಚಾವೋ ಸಂಸ್ಥೆಯು, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶಕರಿಗೆ ನೀಡಿದ ದೂರು ಆಧರಿಸಿ, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶಕರಾದ ಪಲ್ಲವಿ ಆಕುರಾತಿ ಐಎಎಸ್ ಅವರು ದ.ಕ ಜಿಲ್ಲಾಧಿಕಾರಿಗಳಿಗೆ ಘಟನೆಯ ವಿವರ ಪಡೆದು ದಾಳಿ ನಡೆಸಿ ಮಕ್ಕಳನ್ನು ರಕ್ಷಣೆ ಮಾಡುವಂತೆ ಆದೇಶಿಸಿದರು.

officials-raided-house-in-allegations-of-child-labour-case
ವೇತನ ನೀಡದೆ ಬಾಲ ಕಾರ್ಮಿಕರು, ಮಹಿಳೆಯರ ದುಡಿಮೆ ಆರೋಪ

ಈ ಆದೇಶದ ಮೇರೆಗೆ ಬಚ್​ಪನ್ ಬಚಾವೋ ರಾಜ್ಯ ಸಮನ್ವಯಾಧಿಕಾರಿ ಬೆಂಗಳೂರಿನ ಬಿನು ವರ್ಗೀಸ್, ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ಅವರ ನೇತೃತ್ವದಲ್ಲಿ ಬಾಲ ಕಾರ್ಮಿಕ ಅಧಿಕಾರಿಗಳು, ಪುತ್ತೂರು ಕಾರ್ಮಿಕ ಇಲಾಖೆ ಅಧಿಕಾರಿಗಳು, ಸುಳ್ಯ ಸಿಡಿಪಿಓ, ಇನ್ನಿತರೆ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕಿದ್ದಾರೆ.

ದಾಳಿ ನಡೆಸಿದ ವೇಳೆ ಅಧಿಕೃತ ದಾಖಲೆಗಳು ಇಲ್ಲದೇ ಮಾನಸಿಕ ಅಸ್ವಸ್ಥರು, ಮಹಿಳೆಯರು, ಪುಟ್ಟ ಮಕ್ಕಳು ಕಂಡುಬಂದಿದ್ದಾರೆ. ಈ ಪುಟ್ಟ ಮಕ್ಕಳು ದನಗಳನ್ನು ಮೇಯಿಸುತ್ತಿರುವ ವೀಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಮನೆಯವರು ಸಾಮಾಜಿಕ ಸೇವೆ ಮಾಡುತ್ತಿದ್ದೇವೆ ಎಂಬುದಾಗಿ ಹೇಳಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ಟ್ರಸ್ಟ್ ನೋಂದಣಿಯಾಗಲಿ, ಈ ಜನರಿಗೆ ಆಧಾರ್ ಸೇರಿದಂತೆ ಯಾವುದೇ ಅಧಿಕೃತ ದಾಖಲೆಗಳೂ ಇವರ ಬಳಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ 48 ಗಂಟೆಗಳ ಒಳಗಾಗಿ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸುವಂತೆ ಆದೇಶಿಸಲಾಯಿತು.

ಇದನ್ನೂ ಓದಿ: ಪಿಹೆಚ್‌ಡಿ ವಿದ್ಯಾರ್ಥಿನಿಯಿಂದ ಲಂಚ ಸ್ವೀಕಾರ: ಮಂಗಳೂರು ವಿವಿ ಸಹಾಯಕ ಪ್ರೊಫೆಸರ್​ಗೆ 5 ವರ್ಷ ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.