ETV Bharat / state

ಮಹಾಮಾರಿ ಕೊರೊನಾಗೆ ಬಂಟ್ವಾಳದ ಮಹಿಳೆ ಬಲಿ: ರಾಜ್ಯದಲ್ಲಿ 16ಕ್ಕೆ ಏರಿದ ಸಾವಿನ ಸಂಖ್ಯೆ!

ಬಂಟ್ವಾಳದಲ್ಲಿ ಕೊರೊನಾಗೆ 50 ವರ್ಷದ ಮಹಿಳೆ ಮೃತಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

Old woman died by coronavirus at Mangalore
ಮಂಗಳೂರಲ್ಲಿ ಕೊರೊನಾಕ್ಕೆ ವೃದ್ಧೆ ಸಾ
author img

By

Published : Apr 19, 2020, 5:46 PM IST

ಬಂಟ್ವಾಳ(ದಕ್ಷಿಣ ಕನ್ನಡ): ಜಿಲ್ಲೆಯಲ್ಲಿ ಕೊರೊನಾ ವೈರಸ್​ನಿಂದ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಬಂಟ್ವಾಳದ 50 ವರ್ಷದ ಮಹಿಳೆ ಸೋಂಕಿನಿಂದ ಸಾವನ್ನಪ್ಪಿದ್ದು, ಮಧ್ಯಾಹ್ನ ಬಂದ ವರದಿಯಲ್ಲಿ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಪಟ್ಟಣವನ್ನು ಸಂಪೂರ್ಣ ಸೀಲ್​​ಡೌನ್ ಮಾಡಲಾಗಿದೆ. ಬಂಟ್ವಾಳ ಕಸಬಾ, ಜಕ್ರಿಬೆಟ್ಟು, ಬಡ್ಡಕಟ್ಟೆ ಸಹಿತ ಪಟ್ಟಣಕ್ಕೆ ಪ್ರವೇಶಿಸುವ ಮತ್ತು ಹೊರ ಹೋಗುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ಸಾವನ್ನಪ್ಪಿರುವ ಮಹಿಳೆ ಮನೆ ಬಂಟ್ವಾಳ ಪೇಟೆಯ ಮಧ್ಯೆ ಇದ್ದು, ಅದರ ಸುತ್ತಮುತ್ತ ಸುಮಾರು 300ಕ್ಕೂ ಅಧಿಕ ಮನೆಗಳು, ಅಂಗಡಿ, ಮುಂಗಟ್ಟುಗಳಿವೆ. ಈ ಎಲ್ಲಾ ಪ್ರದೇಶಗಳಿಗೂ ಪೊಲೀಸರು ತೆರಳಿ ಮನೆಯಿಂದ ಯಾರೂ ಹೊರ ಬರದಂತೆ ಸೂಚಿಸಿದ್ದಾರೆ.

ಈಗಾಗಲೇ ತಹಶೀಲ್ದಾರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ತೆಗೆದುಕೊಳ್ಳಬೇಕಾದ ಉಪಕ್ರಮಗಳ ಕುರಿತು ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.