ETV Bharat / state

ವಿಟ್ಲದಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ: ಆರೋಪಿ ಬಂಧನ - ಈಟಿವಿ ಭಾರತ ಕನ್ನಡ

ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪಿ ಬಂಧನ
ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪಿ ಬಂಧನ
author img

By

Published : May 17, 2023, 2:06 PM IST

ಬಂಟ್ವಾಳ: ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಕನ್ಯಾನ ಗ್ರಾಮದ ಅಬುಬಕ್ಕರ್ ಕೆ (46) ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 13ರಂದು ಕಸಬಾ ಗ್ರಾಮದ ಬನ ಎಂಬಲ್ಲಿ ಬೈಕ್​ನಲ್ಲಿ ಬಂದ ಅಪರಿಚಿತನೋರ್ವ ದಾರಿ ಕೇಳುವ ನೆಪದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿರುವ ಕುರಿತು ದೂರು ನೀಡಲಾಗಿತ್ತು.

ಈ ಸಂದರ್ಭ ಸಂತ್ರಸ್ತರ ಮನೆಗೆ ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಮುಖಂಡರಾದ ಆಶಾ ತಿಮ್ಮಪ್ಪ ಗೌಡ ಮತ್ತು ಹಲವರು ಭೇಟಿ ನೀಡಿದ್ದು, ವಿಟ್ಲ ಠಾಣೆಯ ಪೊಲೀಸರು ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಇದೀಗ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಪೊಲೀಸರು ಪ್ರಕರಣದಲ್ಲಿ ಆರೋಪಿ ಅಬೂಬಕ್ಕರ್ ಕೆ ಎಂಬಾತನನ್ನು ದಸ್ತಗಿರಿ ಮಾಡಿ ತನಿಖೆ ಕೈಗೊಂಡಿದ್ದಾರೆ.

ಆರೋಪಿ ಪತ್ತೆಯ ಕಾರ್ಯದಲ್ಲಿ ನಿರೀಕ್ಷಕ ನಾಗರಾಜ್ ಎಚ್, ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಕಾರ್ತಿಕ್ ಕಾತರಕಿ ಹಾಗೂ ಸಿಬ್ಬಂದಿಗಳಾದ ರಕ್ಷಿತ್ ಮತ್ತು ಪಿ ಸಿ ಹೇಮರಾಜರವರು ಭಾಗವಹಿಸಿದ್ದರು.

ಇದನ್ನೂ ಓದಿ: ವಿದ್ಯಾರ್ಥಿಗಳೊಂದಿಗೆ ಅಸಭ್ಯ ವರ್ತನೆ ಆರೋಪ: ಶಿಕ್ಷಕ ಅಮಾನತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.