ETV Bharat / state

ಮಂಗಳೂರಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಪೊಲೀಸರಿಂದ ಆರೋಪಿ ಬಂಧನ

author img

By

Published : Dec 2, 2021, 3:14 PM IST

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಸ್ಕೂಟರಿನಲ್ಲಿ ಬಂದ ಕಿರಾತಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸಂಬಂಧ ಆರೋಪಿಯ ಬಂಧನವಾಗಿದೆ. ಆರೋಪಿಯನ್ನು ಕೆ.ಸಿ ರೋಡ್​​​ನ ಮುಳ್ಳುಗುಡ್ಡೆ ನಿವಾಸಿ ರಾಶಿಕ್ ಎಂದು ತಿಳಿದು ಬಂದಿದೆ.

one-arrested-in-case-of-sexual-harassment-
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ

ಉಳ್ಳಾಲ (ಮಂಗಳೂರು): ಶಾಲಾ ಬಾಲಕಿ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ತಲಪಾಡಿಯ ಬಳಿ ಶಾಲೆಗೆ ತೆರಳುವ ವೇಳೆ ಆರೋಪಿ ಅಡ್ಡಗಟ್ಟಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿ ಪರಾರಿಯಾಗಿದ್ದ.

ಈ ಸಂಬಂಧ ಉಳ್ಳಾಲ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಈ ದೂರಿನ ಮೇರೆಗೆ ಸುತ್ತಲಿನ ಸಿಸಿಟಿವಿ ದೃಶ್ಯಗಳ ಆಧರಿಸಿ ಆರೋಪಿ ರಾಶಿಕ್ (22) ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿ ಮಂಗಳೂರಿನ ಕೆ.ಸಿ ರೋಡ್​​​ನ ಮುಳ್ಳುಗುಡ್ಡೆ ನಿವಾಸಿಯಾಗಿದ್ದು, ನಿನ್ನೆ ಬೆಳಗ್ಗೆ 14 ವರ್ಷದ ಬಾಲಕಿಯೊಬ್ಬಳು ತನ್ನ ತಂಗಿಯೊಂದಿಗೆ ತಲಪಾಡಿ ಅಲಂಕಾರುಗುಡ್ಡೆಯಿಂದ ಕಾಲ್ನಡಿಗೆಯಲ್ಲಿ ತಲಪಾಡಿ ಬಳಿ ತೆರಳುತ್ತಿದ್ದ ವೇಳೆ ಆಕೆಯ ಕೈ ಹಿಡಿದು ಎಳೆದಾಡಿದ್ದ ಬಳಿಕ ಅಲ್ಲಿಂದ ಪರಾರಿಯಾಗಿದ್ದ. ಈ ಹಿಂದೆಯೂ ಈತನ ಮೇಲೆ ಕಿರುಕುಳ ನೀಡಿದ್ದ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸ್ಥಳೀಯರು ಜಮಾಯಿಸುವಷ್ಟರಲ್ಲಿ ಆರೋಪಿ ಪರಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.