ಮಂಗಳೂರು : ಪುತ್ತೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯ ಐಸೋಲೇಶನ್ ವಾರ್ಡ್ನಲ್ಲಿ ದಾಖಲಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಇಬ್ಬರು ವೈದ್ಯರು ಸೇರಿ 12 ಮಂದಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ.
ಮಾ.27ರಂದು ಸಂಜೆ ವೇಳೆಗೆ ವ್ಯಕ್ತಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ. ಹೀಗಾಗಿ ಸೋಂಕಿತನಿಗೆ ಚಿಕಿತ್ಸೆ ನೀಡುತ್ತಿದ್ದ ಇಬ್ಬರು ವೈದ್ಯರು, ಆರು ಮಂದಿ ದಾದಿಯರು ಹಾಗೂ ಕೊಠಡಿ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ 4 ಮಂದಿಯನ್ನು ಹೋಂ ಕ್ವಾರೆಂಟೈನ್ನಲ್ಲಿರುವಂತೆ ತಿಳಿಸಲಾಗಿದೆ.
ಮಾ.21ರಂದು ದುಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿ, ಬಳಿಕ ಬಿಎಂಟಿಸಿ ಬಸ್‌ನಲ್ಲಿ ಮೆಜೆಸ್ಟಿಕ್ಗೆ ತೆರಳಿ ಅಲ್ಲಿಂದ ಕೆಎಸ್ಆರ್ಟಿಸಿ ಬಸ್‌ನಲ್ಲಿ ಉಪ್ಪಿನಂಗಡಿಗೆ ಬಂದಿದ್ದಾನೆ. ಬಳಿಕ ರಿಕ್ಷಾ ಮೂಲಕ ತನ್ನ ಮನೆ ಕಲ್ಲೇರಿಗೆ ತೆರಳಿರುವುದಾಗಿ ತಿಳಿದು ಬಂದಿದೆ.