ETV Bharat / state

ಮಂಗಳೂರಿನಲ್ಲಿ ಓರ್ವ ಸೋಂಕಿತ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಂಗಳೂರಿನ ಕುಲಶೇಖರ ನಿವಾಸಿ 45 ವರ್ಷದ ವ್ಯಕ್ತಿ ಎ. 23ರಂದು ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದರು. ಗುಣಮುಖರಾದ ಹಿನ್ನೆಲೆ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ.

One Corona infected person cured
ಮಂಗಳೂರಿನಲ್ಲಿ ಓರ್ವ ಕೊರೊನಾ ಸೋಂಕಿತ ಗುಣಮುಖ
author img

By

Published : May 21, 2020, 9:59 PM IST

ಮಂಗಳೂರು: ವೆನ್ಲಾಕ್​ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿರುವವರ ಪೈಕಿ ಓರ್ವ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

Mangalore
ಜಿಲ್ಲಾಧಿಕಾರಿಗಳ ಪತ್ರಿಕಾ ಪ್ರಕಟಣೆ ಪ್ರತಿ

ಮಂಗಳೂರಿನ ಕುಲಶೇಖರ ನಿವಾಸಿ 45 ವರ್ಷದ ವ್ಯಕ್ತಿ ಏ.23ರಂದು ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದರು. ಗುಣಮುಖರಾದ ಹಿನ್ನೆಲೆ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಗುರುವಾರ 333 ಜನರ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನಿಸಲಾಗಿದೆ. ಈ ಹಿಂದೆ ಕಳುಹಿದ್ದ 502 ಶಂಕಿತರ ವರದಿ ಬಂದಿದ್ದು, ಅದರಲ್ಲಿ 496 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದೆ. 6 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

ಇನ್ನೂ 408 ಮಂದಿಯ ವರದಿ ಬರಬೇಕಿದ್ದು, ಒಟ್ಟು 15 ಮಂದಿ ನಿಗಾದಲ್ಲಿದ್ದಾರೆ. 14 ಮಂದಿಯನ್ನು ಮಂಗಳೂರಿನ ಇಎಸ್ಐ ಹಾಸ್ಪಿಟಲ್​ನ​ ಕ್ವಾರಂಟೈನ್​ನಲ್ಲಿ ಇರಿಸಲಾಗಿದ್ದು, 32 ಮಂದಿಯನ್ನು ಸುರತ್ಕಲ್​ನ ಎನ್ಐಟಿಕೆ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. 6,073 ಜನರು 28 ದಿನಗಳ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ. ಇಂದು 171 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಲ್ಲಿ ಈವರೆಗೆ 41,765 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ.

ಈವರೆಗೆ 6,053 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, ಆ ಪೈಕಿ 5,645 ಮಂದಿಯ ವರದಿ ಬಂದಿದೆ. ಅದರಲ್ಲಿ 5,584 ಮಂದಿಯ ನೆಗೆಟಿವ್ ಎಂದಿದೆ. 61 ಜನರಲ್ಲಿ ಸೋಂಕು ದೃಢಪಟ್ಟಿದ್ದು, 21 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 35 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.