ಕಡಬ: ಕಡಬ ತಾಲೂಕಿನ ಶೀರಾಡಿ ಆರೋಗ್ಯ ಕೇಂದ್ರ ವ್ಯಾಪ್ತಿಯ, ಐತ್ತೂರು ಗ್ರಾಮದ ಪಂಜೋಡಿ ನಿವಾಸಿ ಶಿವಪ್ಪ ಗೌಡರ ಪುತ್ರ ಮೋಹಿತ್ (19) ಇಲಿ ಜ್ವರಕ್ಕೆ ತುತ್ತಾಗಿ ಬುಧವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಶೀತ ಹಾಗೂ ಜ್ವರದಿಂದ ಬಳಲುತ್ತಿದ್ದ ಮೋಹಿತ್ನನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಜ್ವರ ಗುಣಮುಖವಾಗದ ಹಿನ್ನೆಲೆ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಮೋಹಿತ್ ನಿನ್ನೆ ನಿಧನರಾಗಿದ್ದಾರೆ.
ಮೃತ ಮೋಹಿತ್ ತಂದೆ, ತಾಯಿ, ಸಹೋದರಿ ಅವರನ್ನು ಅಗಲಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ.
ಇದನ್ನೂ ಓದಿ: ಬಿಡಾಡಿ ದನಗಳಿಗೆ ಆಸರೆಯಾದ ಆಧುನಿಕ 'ಬಾಪು': ಗೋಶಾಲೆ ತೆರೆದ ಮುದ್ದೇಬಿಹಾಳ ರೈತ