ಬೆಳ್ತಂಗಡಿ: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಮುಖ್ಯರಸ್ತೆ ಬಳಿ ಇರುವ ಆನ್ಸಿಲ್ಕ್ ಮಳಿಗೆ ಬಳಿ ಸಂಭವಿಸಿದೆ.
ಅಶೋಕ್ ದೇವಾಡಿಗ (30) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ವ್ಯಕ್ತಿ.
ನಿನ್ನೆ ರಾತ್ರಿ ಸುಮಾರು 8.45 ರ ವೇಳೆಗೆ ಈ ದುರಂತ ಸಂಭವಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.
ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.