ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಾಸರಗೋಡಿಗೆ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಾ. 14 ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಈ ವ್ಯಕ್ತಿ ಆಗಮಿಸಿದ್ದರು. ಕೇರಳದ ಕಾಸರಗೋಡಿನ ವಿನ ಬದಿಯಡ್ಕ ನೀರ್ಚಾಲು ಮೂಲದ ವ್ಯಕ್ತಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಈ ವಿಮಾನದಲ್ಲಿ ಪ್ರಯಾಣಿಸಿರುವ ಇತರ ಪ್ರಯಾಣಿಕರಿಗೆ ಕೊರೊನಾ ಸೋಂಕು ಹರಡಿರುವ ಸಾಧ್ಯತೆ ಇದ್ದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಸೋಂಕು ಪತ್ತೆಯಾಗಿರುವುದರಿಂದ ಕರಾವಳಿಯಲ್ಲಿ ಆತಂಕ ಸೃಷ್ಟಿಯಾಗಿದೆ.