ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಓರ್ವ ಕೊರೊನಾ ಪಾಸಿಟಿವ್ ರೋಗಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 70 ವರ್ಷ ವಯಸ್ಸಿನ ರೋಗಿ ಸಂಖ್ಯೆ 6282 ಮೃತಪಟ್ಟವರು. ಜೂನ್ 7 ರಂದು ಬೆಂಗಳೂರಿನಿಂದ ಆಗಮಿಸಿದ್ದ ಇವರಿಗೆ ಜೂ. 12 ರಂದು ಕೊರೊನಾ ದೃಢಪಟ್ಟಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಿ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊರೊನಾ ದೃಢಪಟ್ಟಿತ್ತು. ಜೂನ್ 12 ರಂದು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿತ್ತು.
ಮಧುಮೇಹ ಮತ್ತು ನ್ಯುಮೋನಿಯಾದಿಂದ ಇವರು ಬಳಲುತ್ತಿದ್ದರು. ಇವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.