ETV Bharat / state

ಅಕ್ರಮ ಗೋ ಸಾಗಾಟ: ಓರ್ವನ ಬಂಧನ, 16 ಜಾನುವಾರುಗಳ ರಕ್ಷಣೆ - illegally shipping cows

ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, 16 ಜಾನುವಾರುಗಳನ್ನು ರಕ್ಷಿಸುವ ಜೊತೆಗೆ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

Cow
Cow
author img

By

Published : Oct 18, 2020, 3:24 PM IST

ಬಂಟ್ವಾಳ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಸುಮಾರು 16 ಜಾನುವಾರುಗಳನ್ನು ಪುಂಜಾಲಕಟ್ಟೆ ಪೊಲೀಸರು ರಕ್ಷಿಸಿದ್ದಾರೆ.

ಕಾವಳಮೂಡೂರು ಗ್ರಾಮದ ಎನ್.ಸಿ ರೋಡ್‌ನಲ್ಲಿರುವ ಕಾಡು ಪ್ರದೇಶದಲ್ಲಿ ಈ ಜಾನುವಾರುಗಳನ್ನು ಅಮಾನವೀಯವಾಗಿ ಕೂಡಿ ಹಾಕಿ, ಸಾಗಾಟಕ್ಕೆ ಪ್ರಯತ್ನಿಸುತ್ತಿದ್ದ ವೇಳೆ ಪುಂಜಾಲಕಟ್ಟೆ ಎಸ್ಐ ಸೌಮ್ಯಾ ಜೆ. ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ ಪೊಲೀಸ್ ಸಿಬ್ಬಂದಿ ಜೀಪ್, ಕಾರು ಮತ್ತು ದ್ವಿಚಕ್ರ ವಾಹನ ಹಾಗು ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಿದ್ದು, ಉಳಿದವರು ಪರಾರಿಯಾಗಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.