ಮಂಗಳೂರು: ನ್ಯಾಯಾಲಯಗಳಲ್ಲಿ ಔಷಧಾಲಯ ಇರಬೇಕು ಎಂಬ ಸುಪ್ರೀಂಕೋರ್ಟ್ ನಿರ್ದೇಶನ ಮೇರೆಗೆ ನಗರದ ನ್ಯಾಯಾಲಯದಲ್ಲಿ ಇಂದಿನಿಂದ ಔಷಧಾಲಯ ಆರಂಭಿಸಲಾಗಿದೆ.
ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಥಾಪಿಸಲಾಗಿರುವ ಔಷಧಾಲಯವನ್ನು ದ.ಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಡ್ಲೂರು ಸತ್ಯನಾರಾಯಣ ಆಚಾರ್ಯ ಉದ್ಘಾಟಿಸಿದರು. ನಗರದ ಹಳೇ ಸೆಷನ್ಸ್ ನ್ಯಾಯಾಲಯ ಕಟ್ಟಡದಲ್ಲಿ ಔಷಧಾಲಯವನ್ನು ಸ್ಥಾಪಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ, ವಕೀಲ ಸಂಘದ ಅಧ್ಯಕ್ಷರಾದ ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್. ವಿ. ರಾಘವೇಂದ್ರ ಮತ್ತು ಇತರ ಪದಾಧಿಕಾರಿಗಳು, ನ್ಯಾಯಾಂಗ ಇಲಾಖೆ ಅಧಿಕಾರಿಗಳು, ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.