ETV Bharat / state

ಆಪರೇಷನ್ ಎಲಿಫೆಂಟ್ ಸ್ಥಗಿತಗೊಂಡಿಲ್ಲ: ಡಿಎಫ್ಒ ದಿನೇಶ್ ಸ್ಪಷ್ಟನೆ

ಕಡಬದಲ್ಲಿ ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ಸ್ಥಗಿತಗೊಂಡಿಲ್ಲ ಎಂದು ಜಿಲ್ಲಾ ಅರಣ್ಯ ಅಧಿಕಾರಿ ದಿನೇಶ್ ಈಟಿವಿ ಭಾರತಕ್ಕೆ ಸ್ಪಷ್ಟಪಡಿಸಿದ್ದಾರೆ. ​ ​

ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ
ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ
author img

By

Published : Feb 28, 2023, 3:47 PM IST

ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ

ಕಡಬ: ಇಲ್ಲಿಯ ರೆಂಜಿಲಾಡಿ ಗ್ರಾಮದ ನೈಲ ಸಮೀಪ ಫೆ.20ರಂದು ಬೆಳಗ್ಗೆ ಆನೆ ದಾಳಿಯಿಂದ ಇಬ್ಬರು ಮೃತಪಟ್ಟ ಹಿನ್ನೆಲೆ ಅರಣ್ಯ ಇಲಾಖೆ ಕಾಡಾನೆ ಸೆರೆ ಹಿಡಿಯಲು ಆರಂಭಿಸಿದ್ದ "ಆಫರೇಷನ್ ಎಲಿಫೆಂಟ್" ಕಾರ್ಯಾಚರಣೆ ಸ್ಥಗಿತಗೊಳಿಸಿದೆ ಎನ್ನಲಾಗಿದ್ದು, ಇದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ. ಆದರೆ, ಕಾರ್ಯಾಚರಣೆ ಸ್ಧಗಿತ ಮಾಡಿಲ್ಲ ಎಂಬುದಾಗಿ ಜಿಲ್ಲಾ ಅರಣ್ಯ ಅಧಿಕಾರಿ ದಿನೇಶ್ ಅವರು ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

ರೆಂಜಿಲಾಡಿ ಸಮೀಪದ ನೈಲಾ ಎಂಬಲ್ಲಿ ಕಾಡಾನೆಗಳು ಇಬ್ಬರನ್ನು ಬಲಿ ಪಡೆದ ನಂತರ ಕಾಡಾನೆ ಸೆರೆ ಹಿಡಿಯುವಂತೆ ಸ್ಥಳದಲ್ಲೇ ಗ್ರಾಮಸ್ಥರಿಂದ ಪ್ರತಿಭಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ನಾಗರಹೊಳೆಯ ಮತ್ತಿಗೋಡು ಮತ್ತು ದುಬಾರೆ ಸಾಕಾನೆ ಶಿಬಿರಗಳಿಂದ ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಎಂಬ ಐದು ಸಾಕಾನೆಗಳನ್ನು ಕರೆತಂದು ಕಾರ್ಯಾಚರಣೆ ಆರಂಭಿಸಲಾಗಿತ್ತು. ಆ ಬಳಿಕ ಮೂರು ದಿನಗಳ ಕಾರ್ಯಾಚರಣೆಯಲ್ಲಿ ಡಿಎಫ್‌ಒ ದಿನೇಶ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಡಾ.ಮುಜೀಬ್ ನೇತೃತ್ವದಲ್ಲಿ ತಜ್ಞರು ಮತ್ತು ವೈದ್ಯರ ತಂಡ, ಎನ್ಐಟಿಕೆ ನೇತೃತ್ವದಲ್ಲಿ ಡ್ರೋನ್ ಕ್ಯಾಮರಾ ಮತ್ತು ಥರ್ಮಲ್ ಸ್ಕ್ಯಾನರ್ ಬಳಸಿ ಕಾಡಾನೆಯ ಚಲನವಲನಗಳನ್ನು ಪತ್ತೆ ಹಚ್ಚಿ, ಫೆ.23ರಂದು ಇಲ್ಲಿನ ಸುಂಕದಕಟ್ಟೆ - ಕೊಂಬಾರು ರಸ್ತೆಯ ಮಂಡೆಕರ ಬಳಿಯ ಅರಣ್ಯ ಪ್ರದೇಶದಲ್ಲಿ ಒಂದು ಕಾಡಾನೆ ಸೆರೆ ಹಿಡಿದಿದ್ದರು.

ಕಾರ್ಯಾಚರಣೆ ಸ್ಥಗಿತಗೊಂಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಜನ: ಆ ಬಳಿಕ ಸಾಕಾನೆ ಅಭಿಮನ್ಯು ಹಾಗೂ ಇನ್ನೊಂದು ಸಾಕಾನೆ ಜೊತೆಗೆ ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರಕ್ಕೆ ಅದನ್ನು ಸ್ಥಳಾಂತರಿಸಲಾಗಿತ್ತು. ಉಳಿದ ಮೂರು ಆನೆಗಳು ನೆಟ್ಟಣದ ಅರಣ್ಯ ಇಲಾಖೆ ಆವರಣದಲ್ಲಿ ವಿಶ್ರಾಂತಿ ಪಡೆಯುತ್ತಿದ್ದವು. ನಂತರದಲ್ಲಿ ಇದೀಗ ಭಾನುವಾರ ಫೆ.26ರ ಭಾನುವಾರದಂದು ರಾತ್ರಿ ನೆಟ್ಟಣದಲ್ಲಿದ್ದ ಮೂರು ಸಾಕಾನೆಗಳನ್ನೂ ನಾಗರಹೊಳೆಗೆ ಕೊಂಡೊಯ್ಯಲಾಗಿತ್ತು. ಅಲ್ಲದೇ ಇಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಇದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಾಚರಣೆ ನಿಲ್ಲಿಸಿಲ್ಲ ಎಂದು ಅರಣ್ಯಾಧಿಕಾರಿಗಳ ಸ್ಪಷ್ಟನೆ: ಈ ಬಗ್ಗೆ ಈಟಿವಿ ಭಾರತದ ಜೊತೆಗೆ ಮಾತನಾಡಿದ ಜಿಲ್ಲಾ ಅರಣ್ಯ ಅಧಿಕಾರಿ ದಿನೇಶ್, ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ನಿಲ್ಲಿಸಿಲ್ಲ. ನಿಲ್ಲಿಸೋದು ಇಲ್ಲ. ಪ್ರಸ್ತುತ ಸಾಕಾನೆಗಳನ್ನು ಕೆಲವು ಅನಿವಾರ್ಯ ಕಾರಣಗಳಿಂದಾಗಿ ಅದರ ಮಾವುತರು ನಾಗರಹೊಳೆಗೆ ಕರೆದುಕೊಂಡು ಹೋಗಿದ್ದಾರೆ. ಅದರೂ ಇಲ್ಲಿ ಕಾಡಾನೆಗಳ ಕುರುಹು ಇರುವ ಭಾಗಗಳಲ್ಲಿ ನಮ್ಮ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ರಾತ್ರಿ ಹಗಲು ಗಸ್ತು ತಿರುಗುತ್ತಿದ್ದಾರೆ. ಪ್ರಸ್ತುತ ಕಾಡಾನೆಗಳು ಇರುವ ಬಗ್ಗೆ ಗ್ರಾಮಸ್ಥರಿಂದ ಯಾವುದೇ ಅಧಿಕೃತವಾಗಿ ದೂರುಗಳು ಬಂದಿಲ್ಲ. ಒಂದೆರಡು ಕಡೆಗಳಿಂದ ಕಾಡಾನೆಗಳನ್ನು ನೋಡಿದ್ದಾಗಿ ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ನಮ್ಮ ಸಿಬ್ಬಂದಿಗಳು ಅಲ್ಲಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯವಾಗಿ ಕಾಡಾನೆಗಳು ಪತ್ತೆಯಾದಲ್ಲಿ ಯಾವುದೇ ಸಮಯದಲ್ಲೂ ಸಾರ್ವಜನಿಕರಿಗೆ ನಮ್ಮ ಅಧಿಕಾರಿಗಳು ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಆನೆಗಳು ಜನವಸತಿ ಪ್ರದೇಶಕ್ಕೆ ಬಾರದಂತೆ ತಡೆಯಲು ಸರಕಾರ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಕೃಷಿ ಹಾನಿಗೆ ಸಮರ್ಪಕ ಪರಿಹಾರ ಸಿಗುವಂತೆ ಮಾಡಬೇಕು. ಉಪಟಳ ನೀಡುತ್ತಿರುವ ಆನೆಗಳನ್ನು ಕೂಡಲೇ ಅಸಡ್ಡೆ ಮಾಡದೇ ಅರಣ್ಯ ಇಲಾಖೆ ಹಿಡಿದು ಆನೆ ಶಿಬಿರಗಳಿಗೆ ಸ್ಥಳಾಂತರಿಸಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.

ಇದನ್ನೂ ಓದಿ: 3 ದಿನಗಳ ಸತತ ಕಾರ್ಯಾಚರಣೆ: ಕಡಬದಲ್ಲಿ ನರಹಂತಕ ಕಾಡಾನೆ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.