ಮಂಗಳೂರು: ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭೂಕುಸಿತದ ಭಾಗಗಳನ್ನು ತೆರವುಗೊಳಿಸಲಾಗಿದ್ದು, ಆ.12(ನಾಳೆ) ರಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ರವೆಗೆ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.
ಆದರೆ ಸಂಜೆ 7 ರಿಂದ ಬೆಳಗ್ಗೆ 7ರವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ. ಅಲ್ಲದೆ ಭಾರೀ ವಾಹನಗಳ ಸಂಚಾರ ನಿರ್ಬಂಧ ಯಥಾ ಪ್ರಕಾರ ಮುಂದಿನ ಆದೇಶದವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.