ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಮುಂಜಾಗ್ರತ ಕ್ರಮವಾಗಿ ಆಗಸ್ಟ್ 9 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಮುಂದಿನ ಕೆಲ ದಿನಗಳು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಅಂದಾಜು 64.5 ಮಿ.ಮೀ ನಿಂದ 115 ಮಿ.ಮೀ ವರೆಗೆ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈಗಾಗಲೇ ಮಳೆಯಿಂದ ತಗ್ಗು ಪ್ರದೇಶಗಳಿಗೆ ಮಳೆಯ ನೀರು ನುಗ್ಗಿದೆ. ನದಿಗಳು ತುಂಬಿ ಹರಿಯುತ್ತಿರುವ ಹಿನ್ನೆಲೆ, ನೆರೆ ಭೀತಿ ಶುರುವಾಗಿದೆ. ಅರಬ್ಬೀ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.