ಮಂಗಳೂರು: ಕಳೆದ ನಾಲ್ಕು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುತ್ತಿದೆ.
ದ.ಕನ್ನಡ ಜಿಲ್ಲೆಯಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಜಡಿ ಮಳೆಯಾಗುತ್ತಿದ್ದು, ವರುಣನ ಅಬ್ಬರ ಇವತ್ತೂ ಕೂಡ ಮುಂದುವರೆದಿದೆ.
ಮಂಗಳೂರು ನಗರದಲ್ಲಿ ಕೆಲವೆಡೆ ಕೆಲಹೊತ್ತು ವಿರಾಮ ನೀಡುತ್ತಾ ಮಳೆರಾಯ ಅಬ್ಬರಿಸುತ್ತಿದ್ದಾನೆ. ಜಿಲ್ಲೆಯ ಹಲವೆಡೆ ನದಿಗಳು ತುಂಬಿದ್ದು, ನೆರೆಭೀತಿ ಎದುರಾಗಿದೆ. ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಅರಬ್ಬಿ ಸಮುದ್ರದಲ್ಲಿ ಅಲೆಗಳಬ್ಬರ ಹೆಚ್ಚಿದ್ದು ದೊಡ್ಡ ಗಾತ್ರದ ಅಲೆಗಳು ತೀರಕ್ಕಪ್ಪಳಿಸುತ್ತಿವೆ. ಹೀಗಾಗಿ, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.