ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಮೃತದೇಹವನ್ನು ಮಂಗಳೂರಿನ ಯೆನಪೋಯ ಆಸ್ಪತ್ರೆಯಿಂದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಆಸ್ಕರ್ ಮೃತದೇಹವನ್ನು ಬಿಗಿಭದ್ರತೆಯಲ್ಲಿ ಆಂಬ್ಯುಲೆನ್ಸ್ ಮೂಲಕ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಫರ್ನಾಂಡಿಸ್ರವರ ಅಂತಿಮ ಸಂಸ್ಕಾರವನ್ನು ಎಲ್ಲಿ, ಹೇಗೆ ಮಾಡಬೇಕು ಎಂಬುದರ ಬಗ್ಗೆ ಕುಟುಂಬಸ್ಥರು ಇನ್ನೂ ನಿರ್ಧರಿಸಿಲ್ಲ ಎನ್ನಲಾಗುತ್ತಿದೆ.
ಕಳೆದೊಂದು ತಿಂಗಳ ಹಿಂದೆ ಯೋಗ ಮಾಡುವ ವೇಳೆ ಬಿದ್ದು ತಲೆಗೆ ಗಾಯವಾಗಿದ್ದು ಕೋಮಸ್ಥಿತಿಯಲ್ಲಿದ್ದ ಫರ್ನಾಂಡಿಸ್ ಇಂದು ನಿಧನರಾದರು. ಆಸ್ಕರ್ ಅವರಿಗೆ ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕಳೆದೊಂದು ತಿಂಗಳಿನಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರಿಗೆ ಒಂದು ಬಾರಿ ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು. ಆ ಬಳಿಕ ಪ್ರಜ್ಞೆ ಬರಬಹುದು ಎಂದು ನಿರೀಕ್ಷಿಸಲಾಗಿದ್ದರೂ ಪ್ರಜ್ಞೆ ಮರುಕಳಿಸದೆ ಕೋಮಸ್ಥಿತಿಯಲ್ಲೇ ಇದ್ದರು.
ಇದನ್ನೂ ಓದಿ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ