ಮಂಗಳೂರು: ಯೆನೆಪೊಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ ಎಂದು ಯೆನೆಪೊಯ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ತಿಳಿಸಿದ್ದಾರೆ.
ಆಸ್ಕರ್ ಫರ್ನಾಂಡಿಸ್ ಅವರು ವ್ಯಾಯಾಮ ಮಾಡುತ್ತಿರುವ ಸಮಯದಲ್ಲಿ ಬಿದ್ದು ತಲೆಗೆ ಸಣ್ಣ ಪೆಟ್ಟು ಮಾಡಿಕೊಂಡ ಬಳಿಕ ‘ಇಂಟ್ರಾಕ್ರೇನಿಯಲ್’ ರಕ್ತಸ್ರಾವಕ್ಕೆ ಒಳಗಾಗಿದ್ದರು. ಅವರಿಗೆ ಈ ಮೊದಲೇ ಇದ್ದ ಹೃದಯ ಮತ್ತು ಮೂತ್ರಪಿಂಡದ ಸಮಸ್ಯೆಗಳಿಂದ ಆರೋಗ್ಯ ಸ್ಥಿತಿ ಜಟಿಲವಾಗಿತ್ತು. ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು.
ಐದು ದಿನಗಳ ಹಿಂದೆ ತಲೆಗೆ ಪೆಟ್ಟಾಗಿರುವ ಕಾರಣ ಸದ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಿನ ಮಟ್ಟಿಗೆ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ ಎಂದು ಯೆನೆಪೊಯ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುಹಮ್ಮದ್ ತಾಹಿರ್ ತಿಳಿಸಿದ್ದಾರೆ.
ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತ ತಂಡ: ಎದ್ದು ನಿಂತು ಚಪ್ಪಾಳೆ ತಟ್ಟಿ ಬೆಂಬಲಿಸಿದ ಮೋದಿ