ಮಂಗಳೂರು : ಮಂಗಳೂರು ನಗರದ ನೂತನ ಪೊಲೀಸ್ ಕಮೀಷನರ್ ಆಗಿ ಡಾ. ಪಿ ಎಸ್ ಹರ್ಷ ಇಂದು ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರ ಪೊಲೀಸ್ ತಂಡವಾಗಿ ಕಾರ್ಯನಿರ್ವಹಿಸಲಿದೆ. ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕರ್ತವ್ಯ ನಿರ್ವಹಿಸಲಿದೆ. ಜನಪರ, ಜನಸ್ನೇಹಿ, ಕಾನೂನು ಬದ್ದವಾಗಿ ಕರ್ತವ್ಯ ನಿರ್ವಹಿಸುವುದಾಗಿ ಭರವಸೆ ನೀಡಿದರು.