ETV Bharat / state

ಉಸಿರಾಟದ ತೊಂದರೆ.. ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಮಂಗಳೂರಿನ ಆಸ್ಪತ್ರೆಗೆ ದಾಖಲು

ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

author img

By

Published : May 7, 2022, 10:52 PM IST

padma-shri-sukri-bommagowda-hospitalised-in-mangaluru
ಉಸಿರಾಟದ ತೊಂದರೆ.. ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಮಂಗಳೂರಿನ ಆಸ್ಪತ್ರೆಗೆ ದಾಖಲು

ಮಂಗಳೂರು: ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ಸಮಸ್ಯೆ ಮತ್ತು ತಲೆಸುತ್ತುವಿಕೆಯಿಂದ ಮಂಗಳೂರಿನ
ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿನ ಕೆಎಂಸಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಸುಕ್ರಿ ಬೊಮ್ಮಗೌಡ ಅವರಿಗೆ ಉಸಿರಾಟದ ಸಮಸ್ಯೆ ಇದ್ದು, ಇದಕ್ಕೆ ಕಾರವಾರ ವೈದ್ಯರ ಸಲಹೆಯಂತೆ ಮನೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಜೊತೆಗೆ ಕಳೆದ ನಾಲ್ಕೈದು ದಿನದಿಂದ ತಲೆಸುತ್ತುವಿಕೆ ಕಾಣಿಸಿಕೊಂಡಿತ್ತು. ವೈದ್ಯರ ಸಲಹೆಯ ಮೇರೆಗೆ ಮಂಗಳೂರಿನ ಜ್ಯೋತಿ‌ ಕೆಎಂಸಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಸದ್ಯ ಅವರಿಗೆ ಕೆಎಂಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿಯಾಗಿದ್ದಾರೆ. ಅವರು ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕಾರ್ಯಕ್ಕಾಗಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ: ಮಂಟಪದಲ್ಲಿ ತಾಯಿಯ ಪಕ್ಕ ತಂದೆಯ ಮೇಣದ ಪ್ರತಿಮೆ ಕೂರಿಸಿ ಮದುವೆಯಾದ ಮಗ!

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.