ETV Bharat / state

ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರಿಗೆ ಮಂಗಳೂರು ಕೆಎಂಸಿಯಲ್ಲಿ ಶಸ್ತ್ರ ಚಿಕಿತ್ಸೆ

ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

padma-shri-sukri-bommagowda-undergoes-surgery
ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರಿಗೆ ಶಸ್ತ್ರ ಚಿಕಿತ್ಸೆ
author img

By

Published : May 8, 2022, 4:49 PM IST

ಮಂಗಳೂರು: ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಪದ್ಮಶ್ರೀ ಪುರಸ್ಕೃತರಾದ ಸುಕ್ರಿ ಬೊಮ್ಮಗೌಡ ಅವರು ಇಂದು ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸದ್ಯ ತುರ್ತು ನಿಗಾ ಘಟಕದಲ್ಲಿರುವ ಸುಕ್ರಜ್ಜಿಯವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ಸುಕ್ರಿ ಬೊಮ್ಮಗೌಡ ಅವರು ಕಳೆದ 3-4 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇದರ ಜೊತೆಗೆ ಕಳೆದ ನಾಲ್ಕು ದಿನಗಳಿಂದ ತಲೆಸುತ್ತುವಿಕೆ ಕಾಣಿಸಿಕೊಂಡಿದ್ದರಿಂದ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಕ್ರಜ್ಜಿಯವರಿಗೆ ಶನಿವಾರ ತಂತು ಚಿಕಿತ್ಸೆ ಮಾಡಲಾಗಿತ್ತು. ಆದರೆ ಹೃದಯ ಸಂಬಂಧಿತ ಕಾಯಿಲೆಯಿಂದಲೂ ಬಳಲುತ್ತಿರುವ ಅವರಿಗೆ ಇಂದು ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಐಸಿಯುನಲ್ಲಿರುವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಉಸಿರಾಟದ ತೊಂದರೆ.. ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಮಂಗಳೂರಿನ ಆಸ್ಪತ್ರೆಗೆ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.