ETV Bharat / state

ಜಲಪಾತ ವೀಕ್ಷಣೆ ವೇಳೆ ಗುಡ್ಡ ಕುಸಿತ: ಇನ್ನೂ ಸಿಗದ ಯುವಕನ ಕುರುಹು! - ಶಾಸಕ ಹರೀಶ್ ಪೂಂಜಾ

ಬಂಗಾರ್ ಪಲ್ಕೆ ಅರಣ್ಯ ಪ್ರದೇಶದಲ್ಲಿರುವ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಗುಡ್ಡ ಕುಸಿತಗೊಂಡು ಮಣ್ಣಿನಡಿ ಸಿಲುಕಿ ನಾಪತ್ತೆಯಾಗಿದ್ದ ಯುವಕ ಇನ್ನೂ ಪತ್ತೆಯಾಗದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

Palke Falls Hills Collapse Boy Stuck Under the Mud
ಜಲಪಾತ ವೀಕ್ಷಣೆ ವೇಳೆ ಗುಡ್ಡ ಕುಸಿತ: ಇನ್ನೂ ಸಿಗದ ಯುವಕನ ಕುರುಹು
author img

By

Published : Jan 29, 2021, 12:10 PM IST

ಬೆಳ್ತಂಗಡಿ (ದಕ್ಷಿಣಕನ್ನಡ): ತಾಲೂಕಿನ ಎಳನೀರು ಸಮೀಪದ ಬಂಗಾರ್ ಪಲ್ಕೆ ಜಲಪಾತಕ್ಕೆ ತೆರಳಿದ್ದ ವೇಳೆ ಗುಡ್ಡ ಕುಸಿತಗೊಂಡು ಮಣ್ಣಿನಡಿ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಕುರಹು ಇನ್ನೂ ಪತ್ತೆಯಾಗದ ಕಾರಣ ಶೋಧ ಕಾರ್ಯ ಮುಂದುವರೆದಿದೆ.

ಜಲಪಾತ ವೀಕ್ಷಣೆ ವೇಳೆ ಗುಡ್ಡ ಕುಸಿತ: ಇನ್ನೂ ಸಿಗದ ಯುವಕನ ಕುರುಹು

ಈಗಾಗಲೇ ಎಸ್​ಡಿಆರ್​ಎಫ್ ಅಗ್ನಿ ಶಾಮಕ ದಳ, ಪೊಲೀಸ್ ಇಲಾಖೆ, ಸ್ಥಳೀಯರು ಹಾಗೂ ಇನ್ನಿತರ ಸಂಘಟನೆಗಳ ಕಾರ್ಯಕರ್ತರು ಶೋಧ ಕಾರ್ಯಚರಣೆಯಲ್ಲಿ ನಿರತರಾಗಿದ್ದಾರೆ. ದಟ್ಟ ಕಾಡಿನ ನಡುವೆ ಇರುವ ಈ ಸ್ಥಳಕ್ಕೆ ಯಾವುದೇ ವಾಹನವಾಗಲಿ, ಯಂತ್ರಗಳನ್ನಾಗಲಿ ಸಾಗಿಸಲು ಸಾಧ್ಯವಾಗುತ್ತಿಲ್ಲ. ಜೊತೆಗೆ ದೊಡ್ಡ - ದೊಡ್ಡ ಬಂಡೆಗಳು ಕುಸಿದು ಬಿದ್ದಿರುವುದರಿಂದ ಕಾರ್ಯಾಚರಣೆಗೆ ಇನ್ನಷ್ಟು ತೊಡಕಾಗಿದೆ.

ಗುಡ್ಡ ಕುಸಿತದ ಅಪಾಯ ಹೆಚ್ಚಿರುವುದರಿಂದ ತುಂಬಾ ಎಚ್ಚರಿಕೆಯಿಂದ ಶೋಧ ಕಾರ್ಯ ಮುಂದುವರಿಯುತ್ತಿದೆ. ಬೆಳ್ತಂಗಡಿ ಸಬ್ ​ಇನ್ಸ್​ಪೆಕ್ಟರ್ ನಂದ ಕುಮಾರ್ ಸ್ಥಳದಲ್ಲಿದ್ದು, ಕಾರ್ಯಾಚರಣೆಗಳ ಬಗ್ಗೆ ಸೂಕ್ತ ಮಾಹಿತಿ ನೀಡುತ್ತಿದ್ದಾರೆ. ಶಾಸಕ ಹರೀಶ್ ಪೂಂಜಾ ಕೂಡ ಸ್ಥಳಕ್ಕೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಕಾರ್ಯಾಚರಣೆಯ ಬಗ್ಗೆ ಚರ್ಚಿಸಿದ್ದಾರೆ. ಜೊತೆಗೆ ಯುವಕನ ಮನೆಗೆ ತೆರಳಿ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಓದಿ: ಜಲಪಾತ ವೀಕ್ಷಣೆ ವೇಳೆ ಗುಡ್ಡ ಜರಿತ: ಯುವಕ ನಾಪತ್ತೆ

ಬಳಿಕ ಮಾತನಾಡಿದ ಅವರು, ಈಗಾಗಲೇ ಎಲ್ಲರ ಸಹಕಾರದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಎಸ್​ಡಿಆರ್​ಎಫ್, ಅಗ್ನಿ ಶಾಮಕ ದಳ, ಪೊಲೀಸ್ ಇಲಾಖೆ, ಸ್ಥಳೀಯರು ಎಲ್ಲಾ ರೀತಿಯಲ್ಲೂ ಸಹಕಾರ ನೀಡುತ್ತಿದ್ದಾರೆ. ಈಗಾಗಲೇ ಅಧಿಕಾರಿಗಳು ಸೂಚಿಸಿದಂತೆ ಕಾರ್ಯಾಚರಣೆ ಮುಂದುವರಿಸಲಾಗುತ್ತದೆ ಎಂದರು.

ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಮಾತನಾಡಿ, ಸಬ್ ​ಇನ್ಸ್​ಪೆಕ್ಟರ್ ನಂದ ಕುಮಾರ್ ಮಾಹಿತಿ ನೀಡಿದಂತೆ ಕಂಪ್ರೆಸರ್ ಕ್ರಷರ್ ಬ್ರೇಕರ್ ಬಳಸಿ‌ ಬಂಡೆ ಪುಡಿಮಾಡಲು ತಯಾರಿ ನಡೆಸಲಾಗುವುದು. ಕಾಡು ಪ್ರದೇಶವಾಗಿರುವುದರಿಂದ ವ್ಯವಸ್ಥಿತವಾಗಿ ತುಂಬಾ ಎಚ್ಚರಿಕೆಯಿಂದ ಕಾರ್ಯಾಚರಣೆ ಮಾಡಬೇಕಾಗುತ್ತದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.