ಮಂಗಳೂರು(ದಕ್ಷಿಣ ಕನ್ನಡ): ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರಿನ ಕುಡುಪುಕಟ್ಟೆಯ ಯುವಕ ಧೀರಜ್ (25) ಎಂಬಾತನ ಮೆದುಳು ನಿಷ್ಕ್ರಿಯಗೊಂಡಿದ್ದು, ಪೋಷಕರು ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ.
ಮೇ 29ರ ರಾತ್ರಿ ಧೀರಜ್ ಗೆಳೆಯ ಗಣೇಶ್ ಎಂಬುವವರ ಮನೆಗೆಂದು ತೆರಳಿದ್ದರು. ಧೀರಜ್‌ನನ್ನು ಗಣೇಶ್ ಸ್ಕೂಟರ್ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಬಿಕರ್ಣಕಟ್ಟೆ ಬಳಿ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ರಾತ್ರಿ ಎರಡು ಗಂಟೆಯ ಸುಮಾರಿಗೆ ರಿಕ್ಷಾ ಚಾಲಕರೊಬ್ಬರು ಗಾಯಗೊಂಡು ಒದ್ದಾಡುತ್ತಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಇಬ್ಬರಿಗೂ ತೀವ್ರ ಸ್ವರೂಪದ ಗಾಯವಾಗಿದ್ದು, ಇದೀಗ ಧೀರಜ್ನ ಮೆದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ಘೋಷಿಸಿದ್ದಾರೆ.
ಇದನ್ನೂ ಓದಿ: ಶಿಗ್ಗಾಂವಿ ಚಿತ್ರಮಂದಿರದಲ್ಲಿ ಶೂಟೌಟ್ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ
ಈ ಹಿನ್ನೆಲೆಯಲ್ಲಿ ಧೀರಜ್ನ ಅಂಗಾಂಗ ದಾನ ಮಾಡಲು ಪೋಷಕರು ನಿರ್ಧರಿಸಿದ್ದಾರೆ. ಚೆನ್ನೈ ವೈದ್ಯರ ತಂಡ ಮಂಗಳೂರಿನ ಎಜೆ ಆಸ್ಪತ್ರೆಗೆ ಆಗಮಿಸಲಿದ್ದು ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ.