ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಪಕ್ಷ ಸಂಘಟನೆ: ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮದ್ - Mysore Divisional Level Congress Conference

ಕರಾವಳಿಯಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿತ್ತು, ಇಲ್ಲಿ ಮತ್ತೆ ಪಕ್ಷ ಬಲವರ್ಧನೆ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಬಂಟ್ವಾಳದಲ್ಲಿ ಹೇಳಿದ್ದಾರೆ.

dsd
ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಪಕ್ಷದ ಸಂಘಟನೆ
author img

By

Published : Jan 4, 2021, 5:33 PM IST

ಬಂಟ್ವಾಳ: ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವ ಕಾರ್ಯವನ್ನು ಜಿಲ್ಲೆಯಿಂದಲೇ ಆರಂಭಿಸಬೇಕೆನ್ನುವ ಉದ್ದೇಶದಿಂದ ಮೈಸೂರು ವಿಭಾಗೀಯ ಮಟ್ಟದ ಪ್ರತಿನಿಧಿ ಸಂಕಲ್ಪ ಸಮಾವೇಶವನ್ನು ಬಂಟ್ವಾಳದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಪಕ್ಷದ ಸಂಘಟನೆ

ಸಮಾವೇಶದ ಪೂರ್ವಭಾವಿ ಸಿದ್ಧತೆ ವೀಕ್ಷಿಸಲು ಸೋಮವಾರ ಬಂಟ್ವಾಳಕ್ಕೆ ಆಗಮಿಸಿದ್ದ ಅವರು, ಕರಾವಳಿಯಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿತ್ತು. ಇಲ್ಲಿ ಮತ್ತೆ ಪಕ್ಷ ಬಲವರ್ಧನೆ ಮಾಡಬೇಕು. ಮಾಜಿ ಸಚಿವ ಬಿ. ರಮಾನಾಥ್​ ರೈ ಹಾಗೂ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ವಿನಂತಿ ಮೇರೆಗೆ ಸಮ್ಮೇಳನಕ್ಕೆ ಕರಾವಳಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಈ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಮುಖರಾದ ಎಸ್.ಆರ್. ಪಾಟೀಲ ಸಹಿತ ಹಲವು ನಾಯಕರು ಉಪಸ್ಥಿತರಿರಲಿದ್ದಾರೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.