ETV Bharat / state

ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಪಾಸ್ ಕಡ್ಡಾಯ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ - ಕೋವಿಡ್ ಎರಡನೇ ಅಲೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಲಾಗಿದ್ದು, ಈ ಕುರಿತು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Pass compulsory for Public program in Dakshina Kannada
ಸಾರ್ವಜನಿಕ ಸಭೆ, ಸಮಾರಂಭಗಳಿಗೆ ಪಾಸ್ ಕಡ್ಡಾಯ
author img

By

Published : Apr 20, 2021, 11:57 AM IST

ಮಂಗಳೂರು : ಕೋವಿಡ್​ ಪ್ರಸರಣ ತಡೆಯಲು ದ.ಕ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆ, ಸಮಾರಂಭ ಮತ್ತು ಮನೋರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವವರು ಪಾಸ್‍ ಹೊಂದಿರುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬಹುದಾದ ಜನರ ಸಂಖ್ಯೆ (ಗರಿಷ್ಠ ಮಿತಿ) ಗೆ ಅನುಗುಣವಾಗಿ ಅಥವಾ ಸರ್ಕಾರ ಕಾಲ ಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ವಯ, ಆಹ್ವಾನಿತರ ವಿವರಗಳನ್ನು ಪಡೆದು ಪಾಸ್ ವಿತರಿಸಿ ಕೋವಿಡ್ ನಿಯಮಕ್ಕೆ ಬದ್ದರಾಗಿ ಕಾರ್ಯಕ್ರಮ ನಡೆಸಲು ಅಧಿಕಾರಿಗಳು ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತಮ್ಮ ವ್ಯಾಪ್ತಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮ ಪಾಲನೆಯಾಗುತ್ತಿರುವ ಬಗ್ಗೆ ಅಧಿಕಾರಿಗಳು ಖಾತ್ರಿಪಡಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ಕಾರ್ಯಕ್ರಮ ಆಯೋಜಕರು, ಸ್ಥಳದ ಮಾಲೀಕರಿಗೆ ದಂಡ ವಿಧಿಸಬೇಕು. ಸಂಬಂಧಪಟ್ಟ ಸಭಾಂಗಣ, ಕಲ್ಯಾಣ ಮಂಟಪ, ಹಾಲ್‍ಗಳು ಮತ್ತು ಕಾರ್ಯಕ್ರಮ ಸಂಘಟಕರ ಪರವಾನಿಗೆ ರದ್ದುಪಡಿಸಬೇಕು. ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ-2020ರಡಿ, ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51ರಿಂದ 60 ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳಬೇಕು. ಈ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ಯಾವುದೇ ಲೋಪ ದೋಷಗಳಗಾದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಆಯಾ ಅಧಿಕಾರಿಯನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ತಹಶೀಲ್ದಾರರುಗಳು ತಾಲೂಕು ವ್ಯಾಪ್ತಿಯಲ್ಲಿ ಒಟ್ಟಾಗಿ ಮೇಲ್ವಿಚಾರಣೆ ಮಾಡಬೇಕೆಂದು ಡಿಸಿ ಸೂಚಿಸಿದ್ದಾರೆ.

ಮದುವೆ ಸಮಾರಂಭಗಳು : ತೆರೆದ ಪ್ರದೇಶಗಳಲ್ಲಿ 200 ಜನ ಹಾಗೂ ಮಂಟಪ, ಸಭಾಂಗಣ, ಹಾಲ್‍ಗಳು ಇತ್ಯಾದಿ ಮುಚ್ಚಿದ ಸ್ಥಳಗಳಲ್ಲಿ 100 ಜನ ಪಾಲ್ಗೊಳ್ಳಬಹುದು.

ಜನ್ಮದಿನ ಹಾಗೂ ಇತರೆ ಕಾರ್ಯಕ್ರಮಗಳು : ತೆರೆದ ಪ್ರದೇಶಗಳಲ್ಲಿ 50 ಜನರ ಹಾಗೂ ಸಭಾಂಗಣಗಳು, ಹಾಲ್‍ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನ.

ನಿಧನ ಅಥವಾ ಶವಸಂಸ್ಕಾರ : ತೆರೆದ ಪ್ರದೇಶಗಳಲ್ಲಿ 50 ಜನ ಹಾಗೂ ಸಭಾಂಗಣಗಳು, ಹಾಲ್‍ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 25 ಜನರು. ಅಂತ್ಯ ಕ್ರಿಯೆಗೆ 25 ಜನರು ಹಾಗೂ ಇತರೆ ಸಮಾರಂಭಗಳಿಗೆ ಹಾಲ್‍ನ ವಿಸ್ತೀರ್ಣಕ್ಕೆ ಅನುಗುಣವಾಗಿ 25 ಜನರು.

ರಾಜಕೀಯ ಆಚರಣೆ ಹಾಗೂ ಸಮಾರಂಭಗಳು : ತೆರೆದ ಪ್ರದೇಶಗಳಲ್ಲಿ 200 ಜನರು ಪಾಲ್ಗೊಳ್ಳಬಹುದು. ಧಾರ್ಮಿಕ ಆಚರಣೆ ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.