ಉಳ್ಳಾಲ(ಮಂಗಳೂರು): ರೈಲಿಗೆ ಸಿಲುಕಿ ನವಿಲು ಮೃತಪಟ್ಟಿರುವ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೋಟೆಕಾರು ಸ್ಟೆಲ್ಲಾ ಮೇರಿ ಶಾಲಾ ಹಿಂಭಾಗದಲ್ಲಿ ನಡೆದಿದೆ.
ಶುಕ್ರವಾರ ಮಧ್ಯಾಹ್ನ ರೈಲು ಹಳಿಯಲ್ಲಿ ಮೃಪಟ್ಟಿರುವ ನವಿಲು ಕಂಡು ಬಂದಿತ್ತು. ಸ್ಥಳೀಯರು ಪುರಸಭೆ ಮುಖ್ಯಾಧಿಕಾರಿಗೆ ದೂರು ನೀಡಿದ ಹಿನ್ನೆಲೆ, ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು, ಸೋಮೇಶ್ವರದ ಹಿಂದೂ ರುದ್ರಭೂಮಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತಿಮಸಂಸ್ಕಾರ ನಡೆಸಿದರು.
ಈ ವೇಳೆ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ವಾಣಿ ಆಳ್ವ, ಅರಣ್ಯ ಸಂರಕ್ಷಣಾಧಿಕಾರಿ ಸೌಮ್ಯ, ತಾ.ಪಂ ಮಾಜಿ ಸದಸ್ಯ ರವಿಶಂಕರ್, ಪುರಸಭೆ ಪ್ರಬಂಧಕ ಕೃಷ್ಣ ಹಾಗೂ ಸಿಬ್ಬಂದಿ ಶ್ರೀನಾಥ್ ಉಪಸ್ಥಿತರಿದ್ದರು.