ಸುಳ್ಯ: ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡು ಎಂಬಲ್ಲಿ ನಡೆದಿದೆ.
ಸಂಪಾಜೆ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಮಳೆ ಬರುತ್ತಿದ್ದುದರಿಂದ ಕಾರು ನಿಯಂತ್ರಣಕ್ಕೆ ಬಾರದ ಕಾರಣ ಅಪಘಾತ ಸಂಭವಿಸಿದೆ. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.