ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿದ್ದು ಪ್ರತಿ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಮಾರಾಟ ಮತ್ತು ಖರೀದಿಗೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.
ಸೋಂಕು ಹರಡುವಿಕೆ ತಡೆಗಟ್ಟಲು ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದ ಅನುಸಾರ ಆದೇಶ ಹೊರಡಿಸಿರುವುದಾಗಿ ಅವರು ತಿಳಿಸಿದ್ದಾರೆ. ಮೇ 24ರಿಂದ ಜೂನ್ 7ರ ಬೆಳಿಗ್ಗೆ 6 ಗಂಟೆಯವರೆಗೆ ಪ್ರಚಲಿತದಲ್ಲಿರುವ ಸರ್ಕಾರದ ಮಾರ್ಗಸೂಚಿಗೆ ಹೆಚ್ಚುವರಿಯಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದು ನಿಮಗೆ ತಿಳಿದಿರಲಿ:
- ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ.
- ಈ ಅವಧಿಯಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಮಾತ್ರ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ.
- ಈ ಸಮಯದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯ.
- ಉಳಿದ ದಿನಗಳಲ್ಲಿ ದಿನನಿತ್ಯದ ಅಗತ್ಯ ವಸ್ತುಗಳು, ತರಕಾರಿ, ದಿನಸಿಗಳನ್ನು ಮನೆ-ಮನೆಗೆ ಮಾರಾಟ ಮಾಡಲು ಅವಕಾಶ.
- ಎಲ್ಲಾ ಖಾಸಗಿ ವಾಹನಗಳ ಸಂಚಾರ (ವೈದ್ಯಕೀಯ ಸೇವೆ, ಅತಿ ತುರ್ತು ಸೇವೆಗಳನ್ನು ಹಾಗು ಸರ್ಕಾರಿ ನೌಕರರನ್ನು ಅಧಿಕೃತ ಗುರುತಿನ ಚೀಟಿ ಇದ್ದಲ್ಲಿ ಮಾತ್ರ ಹೊರತುಪಡಿಸಿ) ಸಂಪೂರ್ಣ ನಿಷೇಧ.
ಇದನ್ನೂ ಓದಿ: ಕೋವಿಡ್ಗೆ ಬಲಿಯಾದ 8 ತಿಂಗಳ ಗರ್ಭಿಣಿ ವೈದ್ಯೆ