ಮಂಗಳೂರು: ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿಗಳನ್ನು ಬಳಸಿ ಸಿಡಿಮದ್ದು ತಯಾರಿಸುತ್ತಿದ್ದ 4 ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
![illegally-prepared-explosive-ammunition-in-mangalore](https://etvbharatimages.akamaized.net/etvbharat/prod-images/5473839_thum.jpg)
ನರೇಂದ್ರ ಅಲಿಯಾಸ್ ಬಾಬು, ಟಿ.ಬಾಬು, ಟಿ.ಕಾಳಿ ರಾಜ್, ಎಂ. ಕಮಲ ಕನ್ನನ್ ಬಂಧಿತ ಆರೋಪಿಗಳು.
ಆರೋಪಿಗಳು ಪುತ್ತೂರು ತಾಲ್ಲೂಕು ನೆಟ್ಟಣದ ಮುಡ್ನೂರು ಗ್ರಾಮದ ಮಡ್ಯಲ ಮಜಲು ಎಂಬಲ್ಲಿ ಅಕ್ರಮವಾಗಿ ಸಿಡಿಮದ್ದು ತಯಾರಿಸುತ್ತಿದ್ದರು ಎಂಬ ಬಗ್ಗೆ ಪೊಲೀಸರು ಮಾಹಿತಿ ದೊರೆತಿದೆ. ಈ ಮಾಹಿತಿ ಆಧರಿಸಿ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಸಿಬ್ಬಂದಿ ಜೊತೆ ದಾಳಿ ನಡೆಸಿದ್ದಾರೆ.