ETV Bharat / state

ಕಾಂಗ್ರೆಸ್​ನದ್ದು ಗ್ಯಾರಂಟಿ ಕಾರ್ಡ್ ಅಲ್ಲ, ವಿಸಿಟಿಂಗ್ ಕಾರ್ಡ್.. ಸಿಎಂ ಬೊಮ್ಮಾಯಿ ವ್ಯಂಗ್ಯ - political updates

ಕಾಂಗ್ರೆಸ್​ ಅವರು 10 ಕೆಜಿ ಅಕ್ಕಿ ನೀಡುವುದನ್ನು ಚುನಾವಣೆಗೋಸ್ಕರ ಪ್ರಸ್ತಾಪಿಸಿದ್ದಾರೆ. ಜನರನ್ನು ಕೆಲ ಸಂದರ್ಭದಲ್ಲಿ ಮೋಸ ಮಾಡಬಹುದು. ಎಲ್ಲಾ ಸಂದರ್ಭದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

people-throw-congress-guarantee-card-in-dustbin-cm-bommai
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅಲ್ಲ, ವಿಸಿಟಿಂಗ್ ಕಾರ್ಡ್, ಜನ ಅದನ್ನು ಡಸ್ಟ್ ಬಿನ್​ಗೆ ಎಸೆಯುತ್ತಾರೆ: ಸಿಎಂ ಬೊಮ್ಮಾಯಿ
author img

By

Published : Mar 16, 2023, 5:39 PM IST

Updated : Mar 16, 2023, 6:18 PM IST

ಮಂಗಳೂರು: ಕಾಂಗ್ರೆಸ್ ಪಕ್ಷವು ಚುನಾವಣೆಗೆ ಘೋಷಿಸಿರುವ ಗ್ಯಾರಂಟಿಯನ್ನು ಕಾರ್ಡ್ ರೂಪದಲ್ಲಿ ಜನತೆಗೆ ನೀಡುತ್ತಿದೆ. ಅದಕ್ಕೆ ಮೌಲ್ಯವಿಲ್ಲ. ಪುಕ್ಕಟ್ಟೆ ಕಾರ್ಡ್ ಆಗಿರುವ ಅದು ವಿಸಿಟಿಂಗ್ ಕಾರ್ಡ್​ಗೆ ಸಮ. ವಿಸಿಟಿಂಗ್ ಕಾರ್ಡನ್ನು ಡಸ್ಟ್ ಬಿನ್​ಗೆ ಎಸೆಯುವಂತೆ ಜನರು ಇದನ್ನು ಎಸೆಯುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಫಲಾನುಭವಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಗಲಾರದನ್ನು ಹೇಳಿ ಆಸೆ ಹುಟ್ಟಿಸುತ್ತಿದೆ. ತುಪ್ಪದ ವಾಸನೆಯನ್ನು ದೂರದಿಂದ ತೋರಿಸುತ್ತಿದ್ದಾರೆ. ಪ್ರತಿ ಮನೆಗೆ 2 ಸಾವಿರ ರೂ. ನೀಡುವ ಭರವಸೆ ನೀಡಿದ್ದಾರೆ. 2 ಕೋಟಿ ಜನರಿಗೆ 24 ಸಾವಿರ ಕೋಟಿ ಆಗುತ್ತದೆ. ಅದನ್ನು ಕೊಟ್ಟರೆ ಈಗಿನ ಯೋಜನೆ ಬಂದ್ ಆಗುತ್ತದೆ. ಅವರಿಗೆ ಕೊಡಲು ಆಗುವುದಿಲ್ಲ ಎಂದು ತಿಳಿಸಿದರು.

ಜನರಿಗೆ ಮೋಸ ಮಾಡಲು ಸಾಧ್ಯವಿಲ್ಲ: ಇನ್ನು 200 ಯುನಿಟ್ ಉಚಿತ ವಿದ್ಯುತ್ ಕೊಡುವ ಭರವಸೆ ನೀಡಿದ್ದಾರೆ. ಜನರು ಉಪಯೋಗಿಸುವುದು 75 ರಿಂದ 80 ಯುನಿಟ್. 120 ಯುನಿಟ್ ಬಗ್ಗೆ ಜನರಿಗೆ ಯಾಮಾರಿಸುತ್ತಿದ್ದಾರೆ. 10 ಕೆಜಿ ಅಕ್ಕಿ ನೀಡುವುದನ್ನು ಚುನಾವಣೆಗೋಸ್ಕರ ಪ್ರಸ್ತಾಪಿಸಿದ್ದಾರೆ. ಜನರನ್ನು ಕೆಲ ಸಂದರ್ಭದಲ್ಲಿ ಮೋಸ ಮಾಡಬಹುದು. ಎಲ್ಲಾ ಸಂದರ್ಭದಲ್ಲೂ ಮೋಸ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಯುಪಿಎ ಕಾಲದಲ್ಲಿ ಯೋಜನೆಯ ಶೇ.85ರಷ್ಟು ಮಧ್ಯವರ್ತಿಗಳ ಪಾಲಾಗುತ್ತಿತ್ತು -ಸಿಎಂ: ಕೇಂದ್ರ ಸರ್ಕಾರ ರೈತರಿಗಾಗಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿ ಮಾಡಿದೆ. ಮೋದಿ ಪ್ರಧಾನಿಯಾಗಿ ಬರುವುದಕ್ಕಿಂತ ಮೊದಲು ಈ ಯೋಜನೆ ಇರಲಿಲ್ಲ. ಯುಪಿಎ ಸರ್ಕಾರ ಮಾಡಿದ್ದರೆ ದೊಡ್ಡ ದೊಡ್ಡ ಬ್ಯಾನರ್​ಗಳನ್ನು ಹಾಕುತ್ತಿದ್ದರು. ರಾಜೀವ್ ಗಾಂಧಿಯವರು 1 ರೂಪಾಯಿ ನೀಡಿದರೆ 15 ಪೈಸೆ ಜನರಿಗೆ ತಲುಪುತ್ತದೆ ಎಂದು ಹೇಳಿದ್ದರು. ಯುಪಿಎ ಸರ್ಕಾರದ ಕಾಲದಲ್ಲಿ ಶೇ.85ರಷ್ಟು ಮಧ್ಯವರ್ತಿಗಳ ಪಾಲಾಗುತಿತ್ತು. ಯುಪಿಎ ಕಾಲದಲ್ಲಿ ಶೇ.85ರಷ್ಟು ಸರ್ಕಾರ ನಡೆಯುತಿತ್ತು. ಈಗ ಮಧ್ಯವರ್ತಿಗಳೇ ಇಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಅನುದಾನ ಹೋಗುತ್ತಿದೆ ಎಂದರು.

ಫಲಾನುಭವಿ ಸಭೆಯಲ್ಲೇ ರಬ್ಬರ್ ಪ್ಲ್ಯಾಂಟೇಷನ್ ನೌಕರರಿಗೆ ಶೇ. 20ರಷ್ಟು ಬೋನಸ್ ಘೋಷಣೆ ಮಾಡಿದ ಸಿಎಂ, ರಬ್ಬರ್ ಪ್ಲ್ಯಾಂಟೇಷನ್ ಟ್ಯಾಪರ್​ಗಳಿಗೆ ನೀಡುವ ಬೋನಸ್​ ಅನ್ನು ಶೇ.12 ಹೆಚ್ಚುವರಿ ಮಾಡಿ ಒಟ್ಟು ಶೇ. 20ರಷ್ಟು ಬೋನಸ್ ಅನ್ನು ಇಂದು ಮಂಗಳೂರಿನಲ್ಲಿ ನಡೆದ ಫಲಾನುಭವಿಗಳ ಸಭೆಯಲ್ಲಿಯೇ ಮುಖ್ಯಮಂತ್ರಿಗಳು ಘೋಷಣೆ ಮಾಡಿದರು.

ರಬ್ಬರ್ ಪ್ಲ್ಯಾಂಟೇಷನ್ ಟ್ಯಾಪರ್​ಗಳಿಗೆ ನೀಡುವ ಬೋನಸ್ ಅನ್ನು ಶೇ. 8 ರಿಂದ ಶೇ.12ಕ್ಕೆ ಏರಿಕೆ ಮಾಡಲಾಗುತ್ತದೆ ಎಂದು ಘೋಷಿಸುತ್ತಿದ್ದರು. ಈ ವೇಳೆ ಸಚಿವ ಅಂಗಾರ ವೇದಿಕೆಯಲ್ಲಿಯೇ ಅದನ್ನು ಶೇ.20ಕ್ಕೆ ಏರಿಕೆ ಮಾಡಬೇಕೆಂದು ಸಿಎಂಗೆ ಮನವಿ ಮಾಡಿದರು. ಅವರ ಮನವಿಗೆ ಅಸ್ತು ಎಂದ ಸಿಎಂ ಬೋನಸ್ ಅನ್ನು ಶೇ. 12ಕ್ಕೆ ಏರಿಕೆ ಮಾಡಿ ಒಟ್ಟು ಶೇ.20ರಷ್ಟು ಬೋನಸ್ ಕೊಡುವುದಕ್ಕೆ ತೀರ್ಮಾನಿಸಿದ್ದೇನೆ ಎಂದು ಫಲಾನುಭವಿಗಳ ಸಭೆಯಲ್ಲಿಯೇ ಘೋಷಣೆ ಮಾಡಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಸುನಿಲ್ ಕುಮಾರ್, ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಹರೀಶ್ ಪೂಂಜ, ಕೋಟ್ಯಾನ್, ಸಂಜೀವ ಮಠಂದೂರು ಮೊದಲಾದವರು ಉಪಸ್ಥಿತರಿದ್ದರು.

ಬೀದಿಬದಿ ವ್ಯಾಪಾರಿಗಳಿಂದ ಮನವಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಸಮಾವೇಶದ ಸಂದರ್ಭದಲ್ಲಿ ಸಿಎಂಗೆ ಮನವಿ ಸಲ್ಲಿಸಲು ಅವಕಾಶ ಕೋರಲಾಗಿತ್ತು. ಆದರೆ ಪೊಲೀಸರು ಮೇರಿಹಿಲ್ ಹೆಲಿಪ್ಯಾಡ್ ಬಳಿ ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ನೀಡಿರಲಿಲ್ಲ.

ಮುಖ್ಯಮಂತ್ರಿ ಭೇಟಿಗೆ ಪಟ್ಟು ಹಿಡಿದ ಬೀದಿ ವ್ಯಾಪಾರಿಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದರು. ಬಳಿಕ ಪೊಲೀಸರು ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ 10 ಮಂದಿ ಮುಖಂಡರಿಗೆ ಮಾತ್ರ ಸಿಎಂ ಭೇಟಿಗೆ ಅವಕಾಶ ನೀಡಿದ್ದರು. ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಫಲಾನುಭವಿಗಳ ಸಭೆಯಲ್ಲಿ ಅವರಿಗೆ ಮನವಿ ನೀಡಲು ಅವಕಾಶ ನೀಡಲಾಗಿತ್ತು. ಬಿ.ಎಂ. ಇಮ್ತಿಯಾಝ್, ಸುನಿಲ್ ಕುಮಾರ್ ಬಜಾಲ್ ಸೇರಿದಂತೆ 10 ಮಂದಿ ಮುಖಂಡರು ಫಲಾನುಭವಿಗಳ ಸಭೆಯ ಬಳಿಕ ವೇದಿಕೆಯಿಂದ ಇಳಿದು ಬಂದ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಿಸಿಕೊಂಡಂತೆ ನಾವು ಸಮಾವೇಶ ಮಾಡುವುದಿಲ್ಲ: ಕಟೀಲ್ ವ್ಯಂಗ್ಯ

Last Updated : Mar 16, 2023, 6:18 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.