ಮಂಗಳೂರು: ತಾಲೂಕಿನ ಅಡ್ಡೂರಿನಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಅಡ್ಡೂರು ನಿವಾಸಿ ಮುಹಮ್ಮದ್ ತಾಜುದ್ದೀನ್ ಹಲ್ಲೆಗೊಳಗಾಗಿರುವ ಯುವಕ. ಈತ ಮನೆ ಕಡೆ ತೆರಳುತ್ತಿದ್ದ ವೇಳೆ ಮೂವರು ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದ ಯುವಕನ್ನು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.