ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ವಿದೇಶಿ ಕರೆನ್ಸಿಯನ್ನು ಸಾಗಿಸಲು ಯತ್ನಿಸುತ್ತಿದ್ದ ಪ್ರಯಾಣಿಕನನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಭಟ್ಕಳದ ಅತಿಕ್ ರೆಹಮಾನ್ (32) ಬಂಧಿತ ಆರೋಪಿ. ಈತ ಸ್ಪೈಸ್ ಜೆಟ್ ವಿಮಾನದಲ್ಲಿ 16,400 ಅಮೆರಿಕನ್ ಡಾಲರ್ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ವಶಕ್ಕೆ ಪಡೆದ ಕರೆನ್ಸಿಯ ಮೌಲ್ಯ 11,63,580 ರೂ. ಆಗಿದೆ.
ಬಿಸ್ಕೆಟ್ ಪ್ಯಾಕೆಟ್ನಲ್ಲಿ ಅಮೆರಿಕನ್ ಡಾಲರ್ ಅಡಗಿಸಿಟ್ಟು ದುಬೈಗೆ ಪ್ರಯಾಣ ಬೆಳೆಸಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳು ಈತನನ್ನು ಬಂಧಿಸಿ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದಾರೆ.