ETV Bharat / state

ಹಾಡಹಗಲೇ ಪುತ್ತೂರು ಬಸ್​ ನಿಲ್ದಾಣದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ.. ಆರೋಪಿ ಪೊಲೀಸ್​ ವಶಕ್ಕೆ - ಪುತ್ತೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಾಲಕಿಗೆ ಕಿರುಕುಳ

ಹಾಡಹಗಲೇ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

person-detained-for-harassment-on-girl-in-putturu
ಹಾಡಹಗಲೇ ಬಸ್​ ನಿಲ್ದಾಣದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ
author img

By

Published : May 9, 2022, 7:24 PM IST

ಪುತ್ತೂರು(ದಕ್ಷಿಣ ಕನ್ನಡ): ಹಾಡಹಗಲೇ ಅಪ್ರಾಪ್ತೆಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. ದೂರಿನ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಕ್ಕೆ ಬಂದ ಪೊಲೀಸರು ಆರೋಪಿ ಸರಳೀಕಟ್ಟೆ ನಿವಾಸಿ ನೌಫಲ್ (28) ಎಂಬಾತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಗದಗ ಮೂಲದ ಬಾಲಕಿಗೆ ಬಸ್ ನಿಲ್ದಾಣದ ಬಳಿ ಇದ್ದ ಸಂದರ್ಭದಲ್ಲಿ ಆರೋಪಿ ನೌಫಲ್ ಆಕೆಯ ಬಳಿ ಬಂದು 10 ನಿಮಿಷ ನನ್ನ ಜೊತೆ ಬರುತ್ತೀಯಾ, ನಾನು ನಿನಗೆ ಹಣ ಕೊಡುತ್ತೇನೆ ಎಂದು ಅಮಿಷವೊಡ್ಡಿ ತನ್ನ ಜೊತೆ‌ ಬರುವಂತೆ ಒತ್ತಾಯಿಸಿದ್ದಾನೆ ಎನ್ನಲಾಗ್ತಿದೆ.

ಬಾಲಕಿ ಈ ವಿಚಾರವನ್ನು ತನ್ನ ಪೋಷಕರ ಬಳಿ ತಿಳಿಸಿದ ಹಿನ್ನೆಲೆಯಲ್ಲಿ ಬಳಿಕ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಮದ್ವೆಯಾದ 36 ದಿನಕ್ಕೆ ಪ್ರಿಯಕರನ ಜತೆ ಸೇರಿ ಪತಿಯನ್ನು ಕೊಂದಳು.. ತಪ್ಪಿಸಿಕೊಳ್ಳಲು ಕಥೆ ಕಟ್ಟಿದ್ದ ಅರ್ಧಾಂಗಿ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.