ETV Bharat / state

ಕಂಬಳ ಕೂಟ ನಿಷೇಧಿಸುವಂತೆ ‘ಪೇಟಾ’ ಮೇಲ್ಮನವಿ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ - ಈಟಿವಿ ಭಾರತ ಕನ್ನಡ

ಕಂಬಳ ಕೂಟ ನಿಷೇಧಿಸುವಂತೆ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ನ ಸಂವಿಧಾನಿಕ ಪೀಠ ತೀರ್ಪನ್ನು ಕಾಯ್ದಿರಿಸಿದೆ. ಕೆಲವೇ ದಿನಗಳಲ್ಲಿ ಜಲ್ಲಿಕಟ್ಟು, ಕಂಬಳ ಮುಂತಾದ ಕ್ರೀಡೆಗಳ ಕುರಿತು ಸುಪ್ರೀಂಕೋರ್ಟ್ ಸಾಂವಿಧಾನಿಕ‌ ಪೀಠ ಅಂತಿಮ ತೀರ್ಪು ಪ್ರಕಟಿಸಲಿದೆ.

petas-appeal-to-ban-kambala-supreme-court-constitutional-bench-reserves-judgment
ಕಂಬಳ ಕೂಟ ನಿಷೇಧಿಸುವಂತೆ ‘ಪೇಟಾ’ ಮೇಲ್ಮನವಿ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ
author img

By

Published : Dec 11, 2022, 7:49 PM IST

ಪುತ್ತೂರು(ದಕ್ಷಿಣಕನ್ನಡ) : ಕಂಬಳ ಕೂಟ ವಿಷಯ ಕುರಿತಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಕಾಯ್ದಿರಿಸಿದೆ. ಕಂಬಳ ಕೂಟವನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರಾಣಿದಯಾ ಸಂಘದವರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿಯು ಸುಪ್ರೀಂಕೋರ್ಟ್​ನಲ್ಲಿ ತಕರಾರು ಅರ್ಜಿ ಸಲ್ಲಿಸಿತ್ತು.

ಕಂಬಳ ಕೂಟದಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿರುವುದರಿಂದ ಕಂಬಳ ಆಯೋಜನೆಗೆ ನಿಷೇಧ ಹೇರಬೇಕು ಎಂದು ಪ್ರಾಣಿದಯಾ ಸಂಘ ನಿರಂತರವಾಗಿ ಹೋರಾಟ ನಡೆಸುತ್ತಿದೆ‌. ಇದರ ವಿರುದ್ಧ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್​​ ರೈ ಅವರು ಕಾನೂನು ಹೋರಾಟ ನಡೆಸುತ್ತಿದ್ದರು. ಈ ಬಗ್ಗೆ ಸಲ್ಲಿಕೆಯಾಗಿರುವ ತಕರಾರು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ತೀರ್ಪನ್ನು ಕಾಯ್ದಿರಿಸಿದೆ.

ಈ ಹಿಂದೆ ರಾಷ್ಟ್ರಪತಿಯವರು ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಂಬಳ ಕೂಟಕ್ಕೆ ಅವಕಾಶ ಕಲ್ಪಿಸಿದ್ದರು. ಇದರಿಂದಾಗಿ ಕರ್ನಾಟಕದ ಕರಾವಳಿ ಭಾಗದಲ್ಲಿ ನಿರಾತಂಕವಾಗಿ ಕಂಬಳ ಕೂಟ ನಡೆಯುತ್ತಿತ್ತು. ಈ ಮಧ್ಯೆ, ಪ್ರಾಣಿದಯಾ ಸಂಘದವರು ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಕಂಬಳವನ್ನು ನಿಷೇಧಿಸಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು. ಇದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ತಕರಾರು ಅರ್ಜಿ ಸಲ್ಲಿಕೆಯಾಗಿತ್ತು.

ಅಲ್ಲದೆ ಕಂಬಳ ಸಮಿತಿಗಳ ಪರವಾಗಿ ಅಶೋಕ್ ಕುಮಾರ್ ರೈ ಅವರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಕಂಬಳ ಕೂಟಕ್ಕೆ ಪ್ರಾಚೀನ ಇತಿಹಾಸವಿದೆ. ಧಾರ್ಮಿಕ ಪರ‌ಂಪರೆ ಇದೆ. ಕಂಬಳದಲ್ಲಿ ಕೋಣಗಳಿಗೆ ಹಿಂಸೆ ಆಗುವುದಿಲ್ಲ. ಮಕ್ಕಳಂತೆ ಕೋಣಗಳನ್ನು ಸಾಕಿ ಸಲಹಲಾಗುತ್ತಿದೆ‌. ಆದ್ದರಿಂದ ಕಂಬಳ ಕೂಟಕ್ಕೆ ನಿಷೇಧ ಹೇರಬಾರದು. ಎಂದಿನಂತೆ ಕಂಬಳ ಕೂಟ ಆಯೋಜನೆಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ಪೂರ್ಣಗೊಂಡಿದೆ. ಇನ್ನು ಕೆಲವೇ ದಿನಗಳಲ್ಲಿ ಜಲ್ಲಿಕಟ್ಟು, ಕಂಬಳ ಮುಂತಾದ ಕ್ರೀಡೆಗಳ ಕುರಿತು ಸುಪ್ರೀಂಕೋರ್ಟ್ ಸಾಂವಿಧಾನಿಕ‌ ಪೀಠ ಅಂತಿಮ ತೀರ್ಪು ಪ್ರಕಟಿಸಲಿದೆ. ಅಶೋಕ್ ರೈ ಪರ ಖ್ಯಾತ ವಕೀಲ‌ ಸಂಜಯ್ ನೂಲಿ ವಾದ ಮಂಡಿಸುತ್ತಿದ್ದಾರೆ.

ಇದನ್ನೂ ಓದಿ : ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ ಶ್ರೀನಿವಾಸ ಗೌಡ ವಿರುದ್ಧ ದೂರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.