ಬಂಟ್ವಾಳ (ದಕ್ಷಿಣ ಕನ್ನಡ): ಕಿಡಿಗೇಡಿಗಳು ರಸ್ತೆ ಮೇಲೆ ಎಚ್ಚರಿಕೆಯ ಸಂದೇಶ ಬರೆದು ಆತಂಕ ಉಂಟು ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹ ಗಿರಿ ಎಂಬಲ್ಲಿ ಈ ಘಟನೆ ನಡೆದಿದ್ದು, ಪೊಲೀಸರಿಗೆ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
'ಎಚ್ಚರ ಪಿ.ಎಫ್.ಐ.ನಾವು ಮರಳಿ ಬರುತ್ತೇವೆ' ಎಂಬ ಎಚ್ಚರಿಕೆ ರೀತಿಯ ಸಂದೇಶ ರಸ್ತೆಯ ಮೇಲೆ ಬರೆದಿರುವುದು ಕಂಡುಬಂದಿದೆ. ಸ್ಥಳೀಯರು ಪುಂಜಾಲ್ ಕಟ್ಟೆ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿ ತಕ್ಷಣಕ್ಕೆ ಕ್ರಮ ಜರುಗಿಸಿ, ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
(ಓದಿ: ಪಿಎಫ್ಐ ಬಂಧಿತರ ಮೊಬೈಲ್ ರಿಟ್ರೀವ್: ಸ್ಫೋಟಕ ಅಂಶಗಳು ಬಹಿರಂಗ)
ಸಮಾಜ ವಿರೋಧಿ ಚಟುವಟಿಕೆ ನಡೆಸಲು ಸಂಚು ರೂಪಿಸುತ್ತಿದ್ದ ಆರೋಪದಡಿ ಇತ್ತೀಚೆಗೆ ಪಿಎಫ್ಐ ಮೇಲೆ ಎನ್ಐಎ ಮತ್ತು ರಾಜ್ಯ ಪೊಲೀಸರು ದಾಳಿ ಮಾಡಿದ್ದರು. ಬಳಿಕ ಐದು ವರ್ಷಗಳ ಕಾಲ ದೇಶದಲ್ಲಿ ಪಿಎಫ್ಐ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಆದೇಶಿಸಿತ್ತು. ನಂತರ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಹಾಗೂ ಕಚೇರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬೆನ್ನಲ್ಲೇ ಬಂಟ್ವಾಳ ತಾಲೂಕಿನ ರಸ್ತೆ ಮೇಲಿನ ಬರಹ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
(ಓದಿ: ಸ್ಫೋಟಕ ಮಾಹಿತಿ ಬಹಿರಂಗ: ಅಪರಾಧ ನಡೆಸಲು ತರಬೇತಿ ಪಡೆಯುತ್ತಿದ್ದರಾ ಪಿಎಫ್ಐ ಮುಖಂಡರು?)