ETV Bharat / state

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಜೊತೆ ದೈಹಿಕ ಸಂಪರ್ಕ: ಯುವಕನ ವಿರುದ್ಧ ಪೋಕ್ಸೊ ಕೇಸ್​​ - Physical contact with a minor by telling marry her

ಅಪ್ರಾಪ್ತೆಯೋರ್ವಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಯುವಕನೋರ್ವ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

Poxo case filed against young man
ಬಂಟ್ವಾಳ
author img

By

Published : May 19, 2022, 10:32 PM IST

ಬಂಟ್ವಾಳ (ದಕ್ಷಿಣ ಕನ್ನಡ): ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನ ಬಂಧನ ಮಾಡಿರುವ ಬಂಟ್ವಾಳ ನಗರ ಪೊಲೀಸರು ಪೋಕ್ಸೋ ಪ್ರಕರಣದಡಿ ದೂರು ದಾಖಲು ಮಾಡಿಕೊಂಡಿದ್ದಾರೆ.17 ವರ್ಷದ ಬಾಲಕಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದಾಳೆ.

ಎರಡು ವರ್ಷಗಳ ಹಿಂದೆ ಸ್ನೇಹಿತೆ ಮದುವೆ ಕಿನ್ನಿಗೋಳಿಯಲ್ಲಿ ನಡೆದಾಗ ಅಲ್ಲಿನ ಕೊಲ್ಲೂರು ವಾಸಿ ವಿದ್ಯಾರ್ಥಿನಿಗೆ ಪರಿಚಯವಾಗಿ ಮೊಬೈಲ್​ನಲ್ಲಿ ಅನ್ಯೋನ್ಯವಾಗಿದ್ದರು. 2021ರ ಜುಲೈನಲ್ಲಿ ಆರೋಪಿಯ ಮನೆಗೆ ಬಾಲಕಿ ಹೋಗಿದ್ದು, ಅಲ್ಲಿ ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಅಕ್ಟೋಬರ್​ನಲ್ಲೂ ಇದೇ ರೀತಿಯ ಕೃತ್ಯ ನಡೆಸಿದ್ದಾನೆ. ಈ ಹಿನ್ನೆಲೆ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇದೀಗ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.