ಬೆಳ್ತಂಗಡಿ: ತಾಲೂಕಿನ ಶಿಬಾಜೆ ಬಳಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಇಳಿದ ಪರಿಣಾಮ ಸ್ಥಳದಲ್ಲೇ ವ್ಯಕ್ತಿವೋರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾವನ್ನಪ್ಪಿದ ವ್ಯಕ್ತಿಯನ್ನು ಕೊಕ್ಕಡದ ಪೆಲತಿಂಜ ನಿವಾಸಿ ಹರೀಶ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿ ವೇಗದ ವಾಹನ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗ್ತಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.