ETV Bharat / state

ಸೆಪ್ಟೆಂಬರ್ 2ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ನಗರದ ಬಂಗ್ರಕೂಳೂರಿನಲ್ಲಿ ಇರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ‌.

Etv Bharatpm-naredra-modi-to-visit-mangaluru-on-september-2
Etv Bharatಸೆಪ್ಟೆಂಬರ್ 2ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ
author img

By

Published : Aug 22, 2022, 9:17 PM IST

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಮಂಗಳೂರಿನಲ್ಲಿ ಸರ್ಕಾರಿ ಮತ್ತು ಪಕ್ಷದ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಎಂಎನ್ಎಂಪಿಟಿಯಲ್ಲಿ ಸಾಗರಮಾಲಾ ಯೋಜನೆಗೆ ಚಾಲನೆ ನೀಡಲಿದ್ದಾರೆ‌.

ಪ್ರಧಾನಿ ಮೋದಿಯವರು ಆಗಮಿಸುತ್ತಿರುವುದು ಬಿಜೆಪಿ ಪಾಳಯದಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ನಗರದ ಬಂಗ್ರಕೂಳೂರಿನಲ್ಲಿ ಇರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ‌. ಈ ಸಾರ್ವಜನಿಕ ಸಭೆಯಲ್ಲಿ ಈಗಾಗಲೇ ದಕ್ಷಿಣ ಕ‌ನ್ನಡ ಜಿಲ್ಲೆಯ ಪ್ರತಿ ತಾಲೂಕಿನಿಂದ 25 ಸಾವಿರ ಮಂದಿ ಸೇರಿಸುವಂತೆ ಬಿಜೆಪಿ ಯೋಜಿಸಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಆಂಧ್ರ ಸಿಎಂ ಜಗನ್: ಎನ್​ಡಿಎ ಸೇರುತ್ತಾ ವೈಎಸ್​ಆರ್​ಸಿಪಿ?

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಬಳಿಕ ಬಿಜೆಪಿ ವಿರುದ್ಧ ಕಾರ್ಯಕರ್ತರೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಮೇಲೆಯೂ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಆಗಮಿಸುತ್ತಿರುವುದು ರಾಜ್ಯ ಬಿಜೆಪಿಯಲ್ಲಿ ಹುರುಪು ಮೂಡಿಸಲಿದೆ.

ಇದನ್ನೂ ಓದಿ: ಕೊಡಗು ಮೊಟ್ಟೆ ಕೇಸ್‌: ಸಿದ್ದರಾಮಯ್ಯಗೆ ಲಭಿಸಿತು ಝೆಡ್ ಶ್ರೇಣಿಯ ಭದ್ರತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.