ಮಂಗಳೂರು: ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಕಿವಿ ಕೇಳದ, ಮಾತು ಬಾರದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ಯುವತಿಯ ನೆರೆಮನೆಯ ನಿವಾಸಿಯಾಗಿದ್ದು, ಯುವತಿ ಟೈಲರಿಂಗ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಆಕೆಯನ್ನು ನೋಡುತ್ತಿದ್ದ ಆರೋಪಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ.
ಓದಿ: ಟಿಎಂಸಿಗೆ ಕೈಕೊಟ್ಟ ಮತ್ತೊಬ್ಬ ಶಾಸಕ : ರಾಜೀನಾಮೆ ಸಲ್ಲಿಸಿದ ಡೀಪ್ ಹಾಲ್ಡರ್
ಈ ಬಗ್ಗೆ ಯುವತಿ ನೀಡಿರುವ ಮಾಹಿತಿಯಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ಮನೆಯ ಹತ್ತಿರದಲ್ಲಿ ಅಥವಾ ಕೆಲಸ ನಿರ್ವಹಿಸುತ್ತಿರುವ ಪ್ರದೇಶಲ್ಲಿ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಸುಳಿದಾಡುತ್ತಿದ್ದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಇದರಿಂದ ಇಂತಹ ಅನಾಹುತಗಳನ್ನು ತಪ್ಪಿಸಲು ಸಹಕಾರಿಯಾಗುತ್ತದೆ ಎಂದರು.