ಮಂಗಳೂರು: ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ಆರೋಪಿಯನ್ನು ದ.ಕ.ಜಿಲ್ಲೆಯ ಸುಳ್ಯ ತಾಲೂಕಿನ ಕಸ್ಬಾ ಗ್ರಾಮದ ವಿಷ್ಣು ಸರ್ಕಲ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಸುಳ್ಯ ತಾಲೂಕಿನ ಕಸಬಾ ಗ್ರಾಮದ ನಿವಾಸಿ ಅಶ್ರಫ್ ರಿಫ್ವಾನ್ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ಪೊಲೀಸರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.