ETV Bharat / state

ಮಹಿಳೆಯ ಸರ ಎಗರಿಸಿದ ನಾಲ್ವರು ಆರೋಪಿಗಳು ಅಂದರ್​ - Chine snachting case

ವಿಟ್ಲ ಪೊಲೀಸ್ ಠಾಣೆಯಲ್ಲಿ ಮಹಿಳೆ ಚಿನ್ನದ ಸರ ಎಗರಿಸಿದ್ದ ಕುರಿತು ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Chain snatchers
Chain snatchers
author img

By

Published : Sep 24, 2020, 9:30 PM IST

ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ಬಂದು ಮಹಿಳೆಯ ಚಿನ್ನದ ಸರ ಎಗರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸಹಿತ ಒಟ್ಟು ನಾಲ್ವರು ಆರೋಪಿಗಳನ್ನು ವಿಟ್ಲ ಎಸ್ಐ ವಿನೋದ್ ಕುಮಾರ್ ರೆಡ್ಡಿ ನೇತೃತ್ವದ ತಂಡ ಬಂಧಿಸಿದೆ.

ಪುತ್ತೂರು ತಾಲೂಕಿನ ಸವಣೂರು ನಿವಾಸಿಗಳಾದ ಮಹಮ್ಮದ್ ಶಾಕೀರ್ (23), ಮಹಮ್ಮದ್ ಇಕ್ಬಾಲ್ (24), ಕೆ.ಎ. ಮಹಮ್ಮದ್ ಯಾನೆ ಐಟಿ ಮಮ್ಮು (41) ಆರೋಪಿಗಳಿಗೆ ಸಹಕರಿಸಿದ ತಿಂಗಳಾಡಿ ನಿವಾಸಿ ಹಾಜೀರಾ (44) ಬಂಧಿತ ಆರೋಪಿಗಳು.

ಬಂಧಿತರಿಂದ 20,650 ನಗದು, ಕುಂಬ್ರದ ಬ್ಯಾಂಕ್ ನಲ್ಲಿ ಅಡವಿಟ್ಟ ಕಳವು ಮಾಡಿದ ಚಿನ್ನ, ಆಕ್ಟೀವ್ ಹೋಂಡಾ ವಾಹನವನ್ನು ವಶಪಡಿಸಲಾಗಿದೆ.

ಸೆ.22ರಂದು ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಮರುವಾಳ ನಿವಾಸಿ ಮಹಿಳೆಯೊಬ್ಬರು ಬೀಡಿಕೊಟ್ಟು ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಕುಂಡಡ್ಕ ಭಾಗದಿಂದ ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಕುತ್ತಿಗೆಯಲ್ಲಿದ್ದ 4 ಪವನ್ ತೂಕದ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದನು.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಟ್ವಾಳ ವೃತ್ತ ನಿರೀಕ್ಷಕ ನಾಗರಾಜ್ ಟಿ.ಡಿ ಮಾರ್ಗದರ್ಶನದಲ್ಲಿ ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ, ಡಿಸಿಐಬಿ ತಂಡದ ಪ್ರವೀಣ್ ರೈ, ವಿಟ್ಲ ಪೊಲೀಸ್ ಠಾಣೆಯ ಪ್ರಸನ್ನ, ಗಿರೀಶ್, ಲೋಕೇಶ್ ,ವಿನಾಯಕ, ಪ್ರತಾಪ್ ರೆಡ್ಡಿ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.