ETV Bharat / state

ಗಾಂಜಾ ಸೇವನೆ : ಮಂಗಳೂರಲ್ಲಿ ಓರ್ವನ ಬಂಧನ - ಮಂಗಳೂರು ಗಾಂಜಾ ಸೇವನೆ ಪ್ರಕರಣ

ಗಾಂಜಾ ಸೇವನೆ ಮಾಡುತ್ತಿದ್ದ ಓರ್ವ ಆರೋಪಿಯನ್ನು ಮಂಗಳೂರಿನ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣಾ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು ಪೊಲೀಸ್​ ಠಾಣೆ
Mangalore police station
author img

By

Published : Jan 20, 2021, 11:52 AM IST

ಮಂಗಳೂರು: ಗಾಂಜಾ ಸೇವಿಸುತ್ತಿದ್ದ ಆರೋಪದಡಿ ಓರ್ವನನ್ನು ಇಲ್ಲಿನ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪುತ್ತೂರು ತಾಲೂಕಿನ ಮುರ ನಿವಾಸಿ ಎಂ.ಸೈಯದ್ ನಯೀಮ್ (27) ಬಂಧಿತ ಆರೋಪಿ. ಈತ ಮಂಗಳೂರಿನ ಪಂಪ್​​​ವೆಲ್ ಸಭಾಂಗಣದ ದ್ವಾರದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದನು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಸಂಬಂಧ ಪ್ರಕರಣ ದಾಖಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.