ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಪಾಗಲ್ವೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಪುಣಚ ಗ್ರಾಮದ ಮನೋಹರ ಬಂಧಿತ ಆರೋಪಿ. ಈತ ಏಳನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿವೋರ್ವಳಿಗೆ ಕಳೆದೊಂದು ವರ್ಷದಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದ. ಇತ್ತೀಚೆಗೆ ಪೇಟೆಗೆ ಹೋಗಿ ವಾಪಸ್ ಬರುವ ವೇಳೆ ಈತ ಬಾಲಕಿಗೆ ಕಿರುಕುಳ ನೀಡಿದ್ದ. ಈ ಬಗ್ಗೆ ಬಾಲಕಿಯ ಪಾಲಕರು ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.