ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆ ಸಮೀಪದ ತಿರುವೈಲು ಎಂಬಲ್ಲಿ ಜೂಜಾಡುತ್ತಿದ್ದ ಏಳು ಮಂದಿಯನ್ನು ಕಾವೂರು ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದಾರೆ.
![Police attack on gambling in mangalore](https://etvbharatimages.akamaized.net/etvbharat/prod-images/kn-mng-08-7men-arrested-script-ka10015_16082020221114_1608f_1597596074_543.jpg)
ಇಲ್ಲಿನ ಮೂಡುಶೆಡ್ಡೆ ನಿವಾಸಿಗಳಾದ ತಿಮ್ಮಪ್ಪ ಶೆಟ್ಟಿ, ಸಿದ್ದೀಕ್ ಯು., ಸಂತೋಷ್, ಕಿರಣ್, ಮೋಹನ್ ದಾಸ್, ಪ್ರವೀಣ್, ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 2 ಸಾವಿರ ರೂಪಾಯಿ ನಗದು, ಮೂರು ಬೈಕ್ ಹಾಗೂ 92 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಯಾವುದೇ ರೀತಿಯ ಜೂಜಾಟದಂತಹ ಚಟುವಟಿಕೆಗಳು ಕಂಡು ಬಂದರೆ ಪೊಲೀಸರ ಗಮನಕ್ಕೆ ತರಬೇಕು. ಈ ಬಗ್ಗೆ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅರುಣಾಂಶುಗಿರಿ (9480802304), ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಗಾಂವ್ಕರ್ (9480802305), ನಗರ ಪೊಲೀಸ್ ಕಂಟ್ರೋಲ್ ರೂಂ (9480802321) ಅನ್ನು ಸಂಪರ್ಕಿಸಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.