ETV Bharat / state

ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ: ಇಬ್ಬರು ಪಿಂಪ್​ಗಳ ಬಂಧನ

ಸೋಮೇಶ್ವರ ದ್ವಾರದ ಬಳಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಮಹಿಳಾ ಪಿಂಪ್​ಗಳನ್ನು ಬಂಧಿಸಿದ್ದಾರೆ.

ವೇಶ್ಯಾವಾಟಿಕೆ ಗೃಹಕ್ಕೆ ಪೊಲೀಸ್ ದಾಳಿ: ಇಬ್ಬರು ಮಹಿಳಾ ಪಿಂಪ್​ಗಳ ಬಂಧನ
author img

By

Published : Aug 26, 2019, 8:28 PM IST

ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಬಳಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರು ಮಹಿಳಾ ಪಿಂಪ್​ಗಳನ್ನು ಬಂಧಿಸಿದ್ದಾರೆ.

ವೇಶ್ಯಾವಾಟಿಕೆ ಗೃಹಕ್ಕೆ ಪೊಲೀಸ್ ದಾಳಿ: ಇಬ್ಬರು ಮಹಿಳಾ ಪಿಂಪ್​ಗಳ ಬಂಧನ

ಕಾಸರಗೋಡಿನ ಮಂಜೇಶ್ವರದ ಮದನಂತೇಶ್ವರ ದೇವಸ್ಥಾನದ ಬಳಿ ನಿವಾಸಿ ಅರುಂಧತಿ(38), ಮಂಗಳೂರಿನ ಜೆಪ್ಪಿನಮೊಗರು ನಿವಾಸಿ ಸರಸ್ವತಿ(37) ಬಂಧಿತ ಆರೋಪಿಗಳು. ರಂಜಿತಾ ಹಾಗೂ ದಿಲ್​ರಾಜ್ ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಸೋಮೇಶ್ವರ ದ್ವಾರದ ಬಳಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಇಬ್ಬರು ಮಹಿಳಾ ಪಿಂಪ್​ಗಳನ್ನು ವಶಕ್ಕೆ ಪಡೆದುಕೊಂಡು 2 ಮೊಬೈಲ್ ಫೋನ್​ಗಳನ್ನು ಹಾಗೂ 20,800 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಪಿಂಪ್​ಗಳು ಈ ಮನೆಯನ್ನು ಬಾಡಿಗೆಗೆ ಪಡೆದು ಯುವತಿಯರನ್ನು ಈ ಮನೆಯಲ್ಲಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿದ್ದರು. ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ಓರ್ವ ನೊಂದ ಯುವತಿಯನ್ನು ರಕ್ಷಣೆ ಮಾಡಲಾಗಿದೆ.

ಬಂಧಿತ ಇಬ್ಬರು ಮಹಿಳಾ ಪಿಂಪ್​ಗಳನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಅಲ್ಲದೆ ಯುವತಿಯನ್ನು ವೇಶ್ಯಾವಾಟಿಕೆಗೆ ಬೆಂಗಳೂರಿನಿಂದ ಕರೆತಂದ ಆರೋಪಿ ರಂಜಿತಾ ಹಾಗೂ ವೇಶ್ಯಾವಾಟಿಕೆ ದಂಧೆಗೆ ಮನೆಯನ್ನು ಬಾಡಿಗೆಗೆ ನೀಡಿದ ಮನೆಯ ಮಾಲೀಕ ದಿಲ್​ರಾಜ್ ಎಂಬವರು ತಲೆಮರೆಸಿಕೊಂಡಿದ್ದು, ಅವರ ವಿರುದ್ಧ ಕೂಡಾ ಪ್ರಕರಣ ದಾಖಲಿಸಲಾಗಿದೆ.

ಮಾನ್ಯ ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ, ಪೊಲೀಸ್ ಉಪ ಆಯುಕ್ತರಾದ ಅರುಣಾಂಶು ಗಿರಿ(ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಲಕ್ಷ್ಮಿ ಗಣೇಶ್(ಅಪರಾಧ ಮತ್ತು ಸಂಚಾರ)ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ ಸ್ಪೆಕ್ಟರ್ ಶಿವಪ್ರಕಾಶ್ ಆರ್.ನಾಯ್ಕ್ ಸಿಸಿಬಿ ಪಿಎಸ್ಐ ಕಬ್ಬಾಳ್ ರಾಜ್ ಹೆಚ್.ಡಿ. ಹಾಗೂ ಸಿಸಿಬಿ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Intro:ಮಂಗಳೂರು: ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಬಳಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರು ಮಹಿಳಾ ಪಿಂಪ್ ಗಳನ್ನು ಬಂಧಿಸಿದ್ದಾರೆ.

ಕಾಸರಗೋಡಿನ ಮಂಜೇಶ್ವರದ ಮದನಂತೇಶ್ವರ ದೇವಸ್ಥಾನದ ಬಳಿ ನಿವಾಸಿ ಅರುಂಧತಿ(38), ಮಂಗಳೂರಿನ ಜೆಪ್ಪಿನಮೊಗರು ನಿವಾಸಿ ಸರಸ್ವತಿ(37) ಬಂಧಿತ ಆರೋಪಿಗಳು. ರಂಜಿತಾ ಹಾಗೂ ದಿಲ್ ರಾಜ್ ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಸೋಮೇಶ್ವರ ದ್ವಾರದ ಬಳಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಇಬ್ಬರು ಮಹಿಳಾ ಪಿಂಪ್ ಗಳನ್ನು ವಶಕ್ಕೆ ಪಡೆದುಕೊಂಡು 2 ಮೊಬೈಲ್ ಫೋನ್ ಗಳನ್ನು ಹಾಗೂ 20,800 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಮಹಿಳಾ ಪಿಂಪ್ ಗಳು ಈ ಮನೆಯನ್ನು ಬಾಡಿಗೆಗೆ ಪಡೆದು ಯುವತಿಯರನ್ನು ಈ ಮನೆಯಲ್ಲಿ ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆಗೆ ಬಳಸಿಕೊಳ್ಳುತ್ತಿದ್ದರು. ವೇಶ್ಯಾವಾಟಿಕೆ ವೃತ್ತಿ ನಡೆಸುತ್ತಿದ್ದ ಓರ್ವ ನೊಂದ ಯುವತಿಯನ್ನು ರಕ್ಷಣೆ ಮಾಡಲಾಗಿದೆ.

Body:ಬಂಧಿತ ಇಬ್ಬರು ಮಹಿಳಾ ಪಿಂಪ್ ಗಳನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಅಲ್ಲದೆ ಯುವತಿಯನ್ನು ವೇಶ್ಯಾವಾಟಿಕೆಗೆ ಬೆಂಗಳೂರಿನಿಂದ ಕರೆತಂದ ಆರೋಪಿ ರಂಜಿತಾ ಹಾಗೂ ವೇಶ್ಯಾವಾಟಿಕೆ ದಂಧೆಗೆ ಮನೆಯನ್ನು ಬಾಡಿಗೆಗೆ ನೀಡಿದ ಮನೆಯ ಮಾಲಕ ದಿಲ್ ರಾಜ್ ಎಂಬವರು ತಲೆಮರೆಸಿಕೊಂಡಿದ್ದು, ಅವರ ವಿರುದ್ಧ ಕೂಡಾ ಪ್ರಕರಣ ದಾಖಲಿಸಲಾಗಿದೆ.

ಮಾನ್ಯ ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ, ಪೊಲೀಸ್ ಉಪ ಆಯುಕ್ತರಾದ ಅರುಣಾಂಶು ಗಿರಿ(ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಲಕ್ಷ್ಮಿ ಗಣೇಶ್(ಅಪರಾಧ ಮತ್ತು ಸಂಚಾರ)ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ ಸ್ಪೆಕ್ಟರ್ ಶಿವಪ್ರಕಾಶ್ ಆರ್.ನಾಯ್ಕ್ ಸಿಸಿಬಿ ಪಿಎಸ್ಐ ಕಬ್ಬಾಳ್ ರಾಜ್ ಹೆಚ್.ಡಿ. ಹಾಗೂ ಸಿಸಿಬಿ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.