ETV Bharat / state

ಉಳ್ಳಾಲ: ಪೊಲೀಸ್ ಪೇದೆಯ ಸಾವಿಗೆ ಶರಣು .. ಆತ್ಮಹತ್ಯೆಗೆ ಯತ್ನಿಸಿದ ಪಿಯುಸಿ ವಿದ್ಯಾರ್ಥಿನಿ ಸಾವು

ಕೆಎಸ್​ಆರ್​ಪಿಯ ಏಳನೇ ಬೆಟಾಲಿಯನ್​ನ ನೂತನ ಬ್ಯಾಚ್​ನ ಪೊಲೀಸ್ ಕಾನ್ಸ್ಟೇಬಲ್​ ಆತ್ಮಹತ್ಯೆ - ಆತ್ಮಹತ್ಯೆಗೆ ಯತ್ನಿಸಿದ್ದ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು - ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕರಣ

Police constable committed suicide in ullal
ಆತ್ಮಹತ್ಯೆಗೆ ಯತ್ನಿಸಿದ ಪಿಯುಸಿ ವಿದ್ಯಾರ್ಥಿನಿ ಸಾವು
author img

By

Published : Feb 19, 2023, 10:11 PM IST

ಉಳ್ಳಾಲ(ಮಂಗಳೂರು): ಕೆಎಸ್​ಆರ್​ಪಿಯ ಏಳನೇ ಬೆಟಾಲಿಯನ್​ನ ನೂತನ ಬ್ಯಾಚ್​ನ ಪೊಲೀಸ್ ಕಾನ್​ಸ್ಟೇಬಲ್​ವೊಬ್ಬರು ಬಾಡಿಗೆ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಸೈಟ್​ನಲ್ಲಿ ಭಾನುವಾರ ಸಂಜೆ ಬೆಳಕಿಗೆ ಬಂದಿದೆ. ಬೆಳಗಾವಿ ನಿವಾಸಿ ವಿಮಲನಾಥ ಜೈನ್ (28) ಆತ್ಮಹತ್ಯೆಗೆ ಶರಣಾದ ಪೊಲೀಸ್​ ಕಾನ್​​ಸ್ಟೇಬಲ್​ ಎಂದು ಗುರುತಿಸಲಾಗಿದೆ.

ತಿಂಗಳ ಹಿಂದಷ್ಟೇ ತಾಯಿ ತೀರಿಕೊಂಡ ನಂತರ ದುಃಖದಲ್ಲಿದ್ದ ಅವರು, ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ನೂತನ ಬ್ಯಾಚ್ ನವರಾಗಿದ್ದ ವಿಮಲನಾಥ್ ಇಂದು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ: ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಭಾನುವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಂಪಲ ಆಶ್ರಯ ಕಾಲೋನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ(17) ಮೃತ ವಿದ್ಯಾರ್ಥಿನಿ. ಧನ್ಯ ನಗರದ ರಾಮಕೃಷ್ಣ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು.

ಫೆ.14 ರಂದು ಮಧ್ಯಾಹ್ನ ತಾಯಿ ಭವ್ಯ ಮನೆಗೆ ಬಂದಾಗ ಕಾಲೇಜಿಗೆ ರಜೆಯಲ್ಲಿದ್ದ ಧನ್ಯ ಮನೆಯಲ್ಲಿರಲಿಲ್ಲ ಎಂದು ಹೇಳಲಾಗುತ್ತಿದೆ. ಮದ್ಯಾಹ್ನ 3 ಗಂಟೆಗೆ ಧನ್ಯ ಮನೆಗೆ ಮರಳಿದ್ದು ಈ ವೇಳೆ ತಾಯಿ, ಧನ್ಯಳನ್ನು ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿದ್ದು ಗೆಳತಿ ಮ‌ನೆಗೆ ಓದಲು ತೆರಳಿದ್ದಾಗಿ ಹೇಳಿದ್ದಾಳೆ. ಗೆಳತಿ ಮನೆಗೆ ಹೋಗುವಾಗ ಫೋನ್ ಕರೆ ಏಕೆ ಮಾಡಿಲ್ಲ ಎಂದು ತಾಯಿ ಗದರಿದ್ದರು ಎನ್ನಾಲಾಗಿದೆ. ಬಳಿಕ ತಾಯಿ ಸಮೀಪದ ಮನೆಗೆ ತೆರಳಿದ್ದಾಗ, ಧನ್ಯ ಮನೆಯೊಳಗಿದ್ದ ಗೆದ್ದಲಿಗೆ ಹೊಡೆಯುವ ಕೀಟನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡದ್ದಳು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದ್ದಾಳೆ.

ಇದನ್ನೂ ಓದಿ:ಮದ್ಯ ಸೇವೆನೆಗೆ ಹಣ ನೀಡುವಂತೆ ಪೀಡಿಸಿದ್ದಕ್ಕೆ ಕೊಲೆ - ಆರೋಪಿ ಬಂಧನ

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗ ಸಾವು: ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಹೋಬಳಿ ಕೋಳೂರಿನಲ್ಲಿ ಕೃಷಿ ಹೊಂಡಕ್ಕೆ ತಾಯಿ-ಮಗ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ನಡೆದಿದೆ. ಮೃತರನ್ನು ಕೋಳೂರು ನಿವಾಸಿಗಳಾದ ರೂಪ (35), ಹೇಮಂತ್ (9) ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೋಳೂರಿನ ಕೃಷಿ ಹೊಂಡದ ಬಳಿ ಜಾನುವಾರು ಮೇಯಿಸುತ್ತಿದ್ದಾಗ ಈ ಘಟನೆ ನಡೆದಿದೆ.

9 ವರ್ಷದ ಹೇಮಂತ್ ಕೃಷಿ ಹೊಂಡದ ಬಳಿ ಆಟವಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ. ಮಗನನ್ನು ರಕ್ಷಿಸಲು ಹೋದ ತಾಯಿ ಕೂಡ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಸ್ಥಳೀಯರು ಮೃತದೇಹಗಳನ್ನು ಹೊರತೆಗೆದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹಳೇ ದ್ವೇಷಕ್ಕೆ ಹುಬ್ಬಳ್ಳಿಯಲ್ಲಿ ಹರಿಯಿತು ನೆತ್ತರು.. ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.