ETV Bharat / state

ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ : ಬಂಧಿತ ಐವರು ಆರೋಪಿಗಳು ಪೊಲೀಸ್​ ಕಸ್ಟಡಿಗೆ

ಅ. 20 ರಂದು ನಡೆದ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಐವರು ಆರೋಪಿಗಳಿಗೆ ಪೊಲೀಸ್​ ಕಸ್ಟಡಿ ವಿಧಿಸಲಾಗಿದೆ.

Police custody for Bantwal murder accused
ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ
author img

By

Published : Oct 29, 2020, 10:39 PM IST

ಬಂಟ್ವಾಳ : ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಅ. 20 ರಂದು ನಡೆದ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಟ್ವಾಳ ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್ ಕುಲಾಲ್, ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್, ವೆಂಕಪ್ಪ ಯಾನೆ ವೆಂಕಟೇಶ್, ಪ್ರದೀಪ್ ಯಾನೆ ಪಪ್ಪು ಹಾಗೂ ಶರೀಫ್​ ಬಂಧಿತ ಆರೋಪಿಗಳು. ಬಂಧಿತರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಹಾಗೂ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜಾ ಮಾರ್ಗದರ್ಶನದಲ್ಲಿ, ಬಂಟ್ವಾಳ ಪೊಲೀಸ್ ಸರ್ಕಲ್ ಇನ್​ಸ್ಪೆಕ್ಟರ್​ ಟಿ.ಡಿ.ನಾಗರಾಜ್ ಪ್ರಕರಣದ ತನಿಖೆ ನಡೆಸುತ್ತಿದ್ದು, ಎಸ್​ಐಗಳಾದ ಪ್ರಸನ್ನ, ಕಲೈಮಾರ್, ಅವಿನಾಶ್, ನಂದಕುಮಾರ್, ವಿನೋದ್, ರಾಜೇಶ್, ಪಿಐ ರವಿ ಮತ್ತು ಡಿಸಿಐಬಿ ಸಿಬ್ಬಂದಿ ಒಳಗೊಂಡ ಒಟ್ಟು 5 ವಿಶೇಷ ಪತ್ತೆ ತಂಡಗಳನ್ನು ತನಿಖೆಗೆ ರಚಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಹತ್ಯೆಯ ಹಿಂದಿರುವ ಇತರ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.