ETV Bharat / state

ಬಂಟ್ವಾಳದಲ್ಲಿ ಪೊಲೀಸ್ ಬಂದೋಬಸ್ತ್... - ಬಂಟ್ವಾಳದಲ್ಲಿ ಉದ್ವಿಗ್ನ ಪರಿಸ್ಥಿತಿ

ಅಹಿತರಕರ ಘಟನೆಗಳು ನಡೆದಿರುವುದರಿಂದ ಬಂಟ್ವಾಳದಲ್ಲಿ ಪೊಲೀಸರು ನಿಗಾ ವಹಿಸಿದ್ದಾರೆ. ಕೆಲ ಸೂಕ್ಷ್ಮ ಪ್ರದೇಶಗಳ ಮೇಲೆ ಕಣ್ಣಿಟ್ಟು, ಬಂದೋಬಸ್ತ್ ಕಲ್ಪಿಸಿದ್ದಾರೆ.

bantwala police
ಬಂಟ್ವಾಳದಲ್ಲಿ ಪೊಲೀಸ್ ಬಂದೋಬಸ್ತ್
author img

By

Published : Nov 3, 2020, 1:37 AM IST

ಬಂಟ್ವಾಳ: ಕೆಲ ಅಹಿತಕರ ಘಟನೆಗಳು ಬಂಟ್ವಾಳ ಪೊಲೀಸ್ ವೃತ್ತ ವ್ಯಾಪ್ತಿಯಲ್ಲಿ ನಡೆದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಧೈರ್ಯ ಮೂಡಿಸಲು ಹಾಗೂ ಮುಂಜಾಗರೂಕತಾ ಕ್ರಮವಾಗಿ ಬಂಟ್ವಾಳ ತಾಲೂಕಿನಾದ್ಯಂತ ಬಿಗು ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಬಂಟ್ವಾಳ ವೃತ್ತಕ್ಕೆ ಸಂಬಂಧಿಸಿದ ಬಂಟ್ವಾಳ ನಗರ, ಗ್ರಾಮಾಂತರ, ಪುಂಜಾಲಕಟ್ಟೆ, ವಿಟ್ಲ ಠಾಣಾ ವ್ಯಾಪ್ತಿಯ ಗಡಿ ಭಾಗಗಳು, ಆಯಕಟ್ಟಿನ ಜಾಗಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ನಿಗಾ ವಹಿಸುತ್ತಿದ್ದಾರೆ. ಒಟ್ಟು 8 ಕಡೆಗಳಲ್ಲಿ ಚೆಕ್ ಪಾಯಿಂಟ್ ಅಳವಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಸಿರೋಡು, ಕೈಕಂಬ, ಫರಂಗಿಪೇಟೆ, ಮೆಲ್ಕಾರ್, ಕಲ್ಲಡ್ಕ ಹಾಗೂ ಬಂಟ್ವಾಳ ಪೇಟೆಗಳಲ್ಲಿ ರಾತ್ರಿ 10ರ ಬಳಿಕ ಅನಾವಶ್ಯಕವಾಗಿ ತಿರುಗುವವರ ಕುರಿತು ನಿಗಾ ವಹಿಸಲಾಗುತ್ತಿದೆ.

ಈ ಮಧ್ಯೆ, ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳ ಪೈಕಿ ಐವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಫರಂಗಿಪೇಟೆ ಸ್ಟುಡಿಯೋ ಮಾಲೀಕ, ಬಿಜೆಪಿ ಕಾರ್ಯಕರ್ತ ದಿನೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.